BollywoodCinemaDistrictsKarnatakaLatestMain PostSandalwood

ಐಪಿಎಲ್ ಫಿನಾಲೆಯಲ್ಲಿ ಅಮೀರ್ ಖಾನ್ ಸಿನಿಮಾ ‘ಲಾಲ್ ಸಿಂಗ್ ಛಡ್ಡಾ’ ಟ್ರೈಲರ್ ರಿಲೀಸ್

ಬಾಲಿವುಡ್ ಖ್ಯಾತ ನಟ ಅಮೀರ್ ಖಾನ್ ನಟನೆಯ ‘ಲಾಲ್ ಸಿಂಗ್ ಛಡ್ಡಾ’ ಸಿನಿಮಾದ ಟ್ರೈಲರ್ ಇಂದು ಸಂಜೆ ರಿಲೀಸ್ ಆಗಲಿದೆ. ವಿಶೇಷ ಅಂದರೆ, ಇಂದು ಸಂಜೆ ಗುಜರಾತ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2022 ಫೈನಲ್ ಪಂದ್ಯದಲ್ಲಿ ‘ಲಾಲ್ ಸಿಂಗ್ ಛಡ್ಡಾ’ ಸಿನಿಮಾದ ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ : ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ

ಇಂದು ಫಿನಾಲೆಯಲ್ಲಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದ್ದು, ಮೊದಲ ಇನ್ನಿಂಗ್ಸ್ ನ ಪಂದ್ಯದ ಎರಡನೇ ಟೈಮ್ ಔಟ್ ಅವಧಿಯಲ್ಲಿ ಈ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡುತ್ತಿರುವುದಾಗಿ ನಟ ಅಮೀರ್ ಖಾನ್ ಟ್ವೈಟ್ ಮಾಡಿದ್ದಾರೆ. ಫೈನಲ್ ಪಂದ್ಯದ ನಡುವೆ ರಿಲೀಸ್ ಆಗಲಿರುವ ಟ್ರೈಲರ್ ಬಗ್ಗೆ ಈಗಿನಿಂದಲೇ ಕುತೂಹಲ ಶುರುವಾಗಿದೆ. ಇದನ್ನೂ ಓದಿ : ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ

ತಮ್ಮ ವೃತ್ತಿ ಬದುಕಿನುದ್ದಕ್ಕೂ ವೈಶಿಷ್ಟ್ಯ ಪೂರ್ಣ ಸಿನಿಮಾಗಳನ್ನು ಮಾಡುತ್ತಾ ಬಂದವರು ಅಮೀರ್ ಖಾನ್. ಹಾಗಾಗಿ ಇದು ಅವರ ವೃತ್ತಿ ಜೀವನದ ಮತ್ತೊಂದು ಮಹೋನ್ನತ ಚಿತ್ರ ಎಂದು ಬಣ್ಣಿಸಲಾಗುತ್ತಿದೆ. ಈ ಸಿನಿಮಾಗಾಗಿ ಅಮೀರ್ 200ಕ್ಕೂ ಹೆಚ್ಚು ದಿನಗಳ ಕಾಲ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರಂತೆ. 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಸಿನಿಮಾದ ಶೂಟಿಂಗ್ ನಡೆದಿರುವುದು ದಾಖಲೆ. ಇದನ್ನೂ ಓದಿ : ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಸಿನಿಮಾ ಫಸ್ಟ್ ಲುಕ್ ರಿಲೀಸ್

ಅದ್ವೈತ್ ಚಂದನ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಹಾಲಿವುಡ್ ನ ಫಾರೆಸ್ಟ್ ಗಂಪ್ ಸಿನಿಮಾದ ರೀಮೇಕ್ ಚಿತ್ರ ಎಂದು ಹೇಳಲಾಗುತ್ತಿದೆ. ನಟನೆಯ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಅಮೀರ್. ವಿವಿಧ ಕಾಲಘಟ್ಟದಲ್ಲಿ ಕಥೆ ನಡೆಯುವುದರಿಂದ, ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ಅಮೀರ್ ಮಾಡಿಕೊಂಡಿದ್ದಾರಂತೆ.

Leave a Reply

Your email address will not be published.

Back to top button