ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪದಚ್ಯುತಗೊಳಿಸುವ ಸಾವಿರಾರು ಪೋಸ್ಟರ್‌ಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಕಂಡುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ನಾಲ್ವರಲ್ಲಿ ಇಬ್ಬರು ಪ್ರಿಟಿಂಗ್ ಪ್ರೆಸ್ ಅನ್ನು ಹೊಂದಿದ್ದಾರೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪೊಲೀಸರು ದೆಹಲಿಯ ವಿವಿಧ ಸ್ಥಳಗಳಲ್ಲಿ ನಡೆಸಿದ ಬೃಹತ್ ಕಾರ್ಯಾಚರಣೆ ವೇಳೆ ಸುಮಾರು 2,000 ಮೋದಿ ವಿರೋಧಿ (Anti-Modi) ಪೋಸ್ಟರ್‌ಗಳನ್ನು (Posters) ಕೆಳಗಿಳಿಸಿದ್ದಾರೆ. ಇದರಲ್ಲಿ ಹೆಚ್ಚಿನ ಪೋಸ್ಟರ್‌ಗಳಲ್ಲಿ ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೆಗೆದುಹಾಕಿ, ದೇಶವನ್ನು ಉಳಿಸಿ) ಎಂಬ ಘೋಷಣೆಗಳನ್ನು ಹೊಂದಿದ್ದವು.
Advertisement
Advertisement
ಜೊತೆಗೆ 2,000ಕ್ಕೂ ಅಧಿಕ ಪೋಸ್ಟರ್‌ಗಳನ್ನು ಆಮ್ ಆದ್ಮಿ ಪಕ್ಷದ ಕಚೇರಿಗೆ ತಲುಪಿಸಲಾಗುತ್ತಿತ್ತು. ಐಪಿ ಎಸ್ಟೇಟ್ ಪ್ರದೇಶದಲ್ಲಿ ವ್ಯಾನ್ ಅನ್ನು ಅಡ್ಡಗಟ್ಟಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೋಸ್ಟರ್‌ಗಳು ಇರುವುದು ಕಂಡುಬಂದಿದೆ. ಈ ಬಗ್ಗೆ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಪೋಸ್ಟರ್‌ಗಳನ್ನು ಆಪ್ (AAP) ಕೇಂದ್ರ ಕಚೇರಿಗೆ ತಲುಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾನೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ಪೋಸ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಗಗನಕ್ಕೇರಿದ Gold Rate – 60 ಸಾವಿರ ಗಡಿ ದಾಟಿದ ಚಿನ್ನ
Advertisement
Advertisement
ಮೋದಿ ಹಟಾವೋ, ದೇಶ್ ಬಚಾವೋ ಪೋಸ್ಟರ್‌ಗಳನ್ನು ಮುದ್ರಿಸಲು ತಮಗೆ 50,000 ಆದೇಶ ಬಂದಿದೆ ಎಂದು ಬಂಧಿತ ಪ್ರಿಂಟಿಂಗ್ ಪ್ರೆಸ್ ಮಾಲೀಕರು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಘಟನೆಗೆ ಸಂಬಂಧಿಸಿ ಎಎಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು