ನವದೆಹಲಿ: ಸರ್ಕಾರಿ ಜಾಹೀರಾತು ಹೆಸರಿನಲ್ಲಿ ಆಮ್ ಆದ್ಮಿ ಪಕ್ಷ (AAP) ರಾಜಕೀಯ ಜಾಹೀರಾತುಗಳಿಗೆ ಬಳಸಿರುವ 97 ಕೋಟಿ ರೂ. ಹಣವನ್ನು ವಸೂಲಿ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (Lieutenant Governor VK Saxena) ಅವರು ಮುಖ್ಯ ಕಾರ್ಯದರ್ಶಿಗಳಿಗೆ ಮಂಗಳವಾರ ಆದೇಶ ನೀಡಿದ್ದಾರೆ.
Advertisement
ದೆಹಲಿಯ ಆಡಳಿತಾರೂಢ ಆಪ್ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು, 2016ರ ದೆಹಲಿ ಹೈಕೋಟ್ ಆದೇಶವನ್ನು ಹಾಗೂ 2016ರ ಸರ್ಕಾರಿ ಜಾಹೀರಾತುಗಳಲ್ಲಿ ವಿಷಯ ನಿಯಂತ್ರಣ ಸಮಿತಿ (CCRGA) ಆದೇಶಗಳನ್ನು ಉಲ್ಲಂಘಿಸಿದೆ ಎಂದು ಸಕ್ಸೇನಾ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್
Advertisement
Advertisement
ಎಫ್ಟಿನೆಂಟ್ ಗವರ್ನರ್ ಸರ್ಕಾರ ಪ್ರಕಟಿಸಿರುವ ಕೆಲವು ನಿರ್ದಿಷ್ಟ ಜಾಹೀರಾತುಗಳನ್ನು ಗುರುತಿಸಿ, ಇದು ಮಾರ್ಗಸೂಚಿಗಳ ಸಂಪೂರ್ಣ ಉಲ್ಲಂಘನೆಯಾಗಿದೆ. ಅಂತಹ ಜಾಹೀರಾತುಗಳಿಗೆ ಖರ್ಚು ಮಾಡಿರುವ ಮೊತ್ತವನ್ನು ಲೆಕ್ಕ ಹಾಕಲು ಹಾಗೂ ಆಪ್ ನಿಂದ ವಸೂಲಿ ಮಾಡುವಂತೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ