ನವದೆಹಲಿ: ಪಂಜಾಬ್ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಹೊತ್ತಲ್ಲಿ ಆಮ್ ಅದ್ಮಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗುತ್ತಿದೆ. ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹೊತ್ತಲ್ಲಿ ರಾಜಕೀಯ ಪಕ್ಷಗಳಲ್ಲಾಗುತ್ತಿರುವ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.
I have said again & again that when the time comes we will give you a good CM face, it could be anyone. We are not thinking about it right now: AAP national convener and Delhi CM Arvind Kejriwal in Ludhiana, when asked about the party’s CM face for Punjab elections pic.twitter.com/UmHs8Lb01r
— ANI (@ANI) September 30, 2021
Advertisement
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಬಳಿಕ ಆಮ್ ಅದ್ಮಿ ಸೇರ್ಪಡೆಯಾಗಬಹುದು ಎಂದು ಪಂಜಾಬ್ ನಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೆ ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎನ್ನುವ ಊಹೆಗಳು ಕೇಳಿ ಬಂದಿವೆ. ಇದನ್ನೂ ಓದಿ: ಆರ್‌ಎಸ್‌ಎಸ್ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ
Advertisement
Advertisement
ಈ ಚರ್ಚೆಗಳ ಬೆನ್ನಲ್ಲೇ ಪಂಜಾಬ್ ಗೆ ಭೇಟಿ ನೀಡಿದ ದೆಹಲಿಯ ಸಿಎಂ ಮತ್ತು ಆಮ್ ಅದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ನವಜೋತ್ ಸಿಂಗ್ ಸಿಧು ನಮ್ಮ ಸಂಪರ್ಕದಲ್ಲಿ ಇಲ್ಲ. ಇದೊಂದು ಊಹಾತ್ಮಕ ಪಕ್ಷ ಎಂದು ಪ್ರತಿಕ್ರಿಯಿಸಿದ್ದಾರೆ.
Advertisement
It is a hypothetical question, if anything like that happens we will tell you first of all: AAP national convener and Delhi CM Arvind Kejriwal when asked if Navjot Singh Sidhu will join Aam Aadmi Party pic.twitter.com/IuosVYaBSa
— ANI (@ANI) September 30, 2021
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಲೋಕಸಭಾ ಸದಸ್ಯ ಭಗವಂತ್ ಮನ್ ನನ್ನ ಕಿರಿಯ ಸಹೋದರ. ಅವರು ಪಂಜಾಬ್ ಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ಅವರು ಶ್ಲಾಘಿಸಿದ್ದಾರೆ. ಈ ಹೇಳಿಕೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದ್ದು, ಭಗವಂತ್ ಮನ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.