ಪಂಜಾಬ್: ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆ. ಇದೀಗ ಅವರ ಪ್ರತಿರೂಪ ಭಗವಂತ್ ಮಾನ್ ಮತ್ತು ಅವರ ಮಂತ್ರಿಗಳು ಪಂಜಾಬ್‍ನಲ್ಲಿ ಪ್ರಾಮಾಣಿಕವಾಗಿ ಸರ್ಕಾರವನ್ನು ನಡೆಸಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
Advertisement
ಪಂಜಾಬ್ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರು ಮಾರ್ಚ್ 23ರಂದು ಸ್ವಾತಂತ್ರ್ಯ ಹೋರಾಟಗಾರ ಭಗತ್‍ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ `ಭ್ರಷ್ಟಾಚಾರ ನಿಗ್ರಹ’ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಯಾರಾದರೂ ಲಂಚ ಕೇಳಿದರೇ ಅವರ ಆಡಿಯೋ, ವಿಡಿಯೋವನ್ನು ಈ ಸಂಖ್ಯೆಗೆ ಕಳುಹಿಸಿ ಎಂದು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
Advertisement
Advertisement
ಭಗವಂತ್ ಮಾನ್ ಅವರ ಈ ನಿರ್ಧಾರವನ್ನು ಕೇಜ್ರಿವಾಲ್ ಅವರು ಸ್ವಾಗತಿಸಿದ್ದು, ಮುಂದೆ ಯಾರಾದರೂ ನಿಮ್ಮನ್ನು ಲಂಚ ಕೇಳಿದರೆ, ನಿಮ್ಮ ಫೋನ್ ತೆಗೆದುಕೊಂಡು ರೆಕಾರ್ಡ್ ಮಾಡಿ ಅದನ್ನು ಭಗವಂತ್ ಮಾನ್ ಅವರ ನಂಬರ್‍ಗೆ ಕಳುಹಿಸಿ. ಇದು ಭಗವಂತ್ ಮಾನ್ ಅವರ ವೈಯಕ್ತಿಕ ನಂಬರ್ ಆಗಿದ್ದು, ಲಂಚ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ
Advertisement
भगत सिंह जी के शहीदी दिवस पर, हम anti-corruption हेल्पलाइन नम्बर जारी करेंगे। वो मेरा पर्सनल वॉट्सऐप नंबर होगा। अगर आपसे कोई भी रिश्वत मांगे, उसकी वीडियो/ऑडियो रिकॉर्डिंग करके मुझे भेज देना। भ्रष्टाचारियों के ख़िलाफ़ सख्त एक्शन लिया जाएगा।
पंजाब में अब भ्रष्टाचार नहीं चलेगा।
— Bhagwant Mann (@BhagwantMann) March 17, 2022
ನಾನು ಮೊದಲ ಬಾರಿಗೆ ದೆಹಲಿಯಲ್ಲಿ ಸರ್ಕಾರ ರಚಿಸಿದಾಗ, ನಾನು ಸಹ ವಾಟ್ಸಾಪ್ ಸಂಖ್ಯೆಯನ್ನು ನೀಡಿದ್ದೆ ಮತ್ತು 49 ದಿನಗಳಲ್ಲಿ 30-32 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಜೈಲಿಗೆ ಕಳುಹಿಸಿದ್ದೆ. ದೆಹಲಿಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲಾಯಿತು ಮತ್ತು ಫೋನ್ ಸಾಮಾನ್ಯ ಜನರ ಸಬಲೀಕರಣದ ದೊಡ್ಡ ಅಸ್ತ್ರ್ರವಾಯಿತು ಎಂದಿದ್ದಾರೆ. ಇದನ್ನೂ ಓದಿ: 13 ವರ್ಷದ ಬಾಲಕ ಟ್ರಕ್ ಓಡಿಸುತ್ತಾ ವ್ಯಾನ್‍ಗೆ ಡಿಕ್ಕಿ – 9 ಮಂದಿ ಬಲಿ, ಹೊತ್ತಿ ಉರಿದ ವಾಹನ