ನವದೆಹಲಿ: ಸರ್ಕಾರಿ ಜಾಹೀರಾತು ಪ್ರಸಾರ ಮಾಡುವ ನೆಪದಲ್ಲಿ ರಾಜಕೀಯ ಜಾಹೀರಾತುಗಳನ್ನ (Political Advertisements) ಪ್ರಸಾರ ಮಾಡಲು ಆಮ್ ಆದ್ಮಿ ಪಕ್ಷವು (AAP) 163.62 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದೆ. ಆ ಮೊತ್ತವನ್ನು ಹಿಂದಿರುಗಿಸುವಂತೆ ದೆಹಲಿ ಸರ್ಕಾರ (Delhi Government) ನೋಟಿಸ್ ಜಾರಿಗೊಳಿಸಿದೆ.
ದೆಹಲಿ ಆಡಳಿತ ಪಕ್ಷವು 10 ದಿನಗಳಲ್ಲಿ ಈ ಮೊತ್ತ ಪಾವತಿಸುವಂತೆ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (DIP) ನೋಟಿಸ್‌ನಲ್ಲಿ ತಾಕೀತು ಮಾಡಿದೆ. 163,61,88,265 ರೂ. ಮೊತ್ತ ಠೇವಣಿ ಇಡುವ ಮೂಲಕ ಹಣ ಮರುಪಾವತಿಸಲು ಅಂತಿಮ ಅವಕಾಶ ನೀಡಿದೆ. ಇದನ್ನೂ ಓದಿ: ಕುಡಿದ ನಶೆಯಲ್ಲಿ ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ
Advertisement
Advertisement
ಒಂದು ವೇಳೆ ಎಎಪಿ ಸಂಚಾಲಕರು ಠೇವಣಿ ಇಡಲು ವಿಫಲವಾದಲ್ಲಿ ಕಾನೂನಿನ ಅನ್ವಯ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಜೊತೆಗೆ ನಿರ್ದಿಷ್ಟ ಕಾಲಮಿತಿಯಲ್ಲೇ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್ ಅನುಮತಿ
Advertisement
ದೆಹಲಿ ರಾಜ್ಯಪಾಲ ವಿನಯ್ ಕುಮಾರ್ ಸಕ್ಸೇನಾ (Vinai Kumar Saxena), ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಎಎಪಿ ಪಕ್ಷವು ಸರ್ಕಾರಿ ಜಾಹೀರಾತುಗಳ ಸೋಗಿನಲ್ಲಿ ರಾಜಕೀಯ ಜಾಹೀರಾತುಗಳನ್ನ ಪ್ರಚಾರ ಮಾಡ್ತಿದೆ ಎಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.
Advertisement
ಆದ್ರೆ ಎಎಪಿ ಈ ರೀತಿಯ ಆದೇಶಗಳನ್ನು ಹೊರಡಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ. ರಾಜ್ಯಪಾಲರ ನಿರ್ದೇಶನಗಳು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k