ದೆಹಲಿ ಶಾಲೆಯಲ್ಲಿ ಹಿಜಬ್ ತೆಗೆಯುವಂತೆ ಶಿಕ್ಷಕರಿಂದ ವಿದ್ಯಾರ್ಥಿನಿಗೆ ಒತ್ತಾಯ – ಸರ್ಕಾರ ಹೇಳಿದ್ದೇನು?

Public TV
2 Min Read
manish sisodia

ನವದೆಹಲಿ: ದೆಹಲಿಯ ಸರ್ಕಾರಿ ಶಾಲೆಯಲ್ಲಿ ಹಿಜಬ್ ತೆಗೆಯುವಂತೆ ಶಿಕ್ಷಕರು ಹೇಳಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಅಂತಹ ಯಾವುದೇ ನಿರ್ಬಂಧಗಳನ್ನು ನಾವು ವಿಧಿಸಿಲ್ಲ. ಕೆಲವರು ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಸ್ತಫಾಬಾದ್‍ನಲ್ಲಿರುವ ದೆಹಲಿಯ ಸರ್ಕಾರಿ ಶಾಲೆಯ ಅಪ್ರಾಪ್ತ ಬಾಲಕಿಯೊಬ್ಬಳು ಶಾಲೆಯಲ್ಲಿ ತನ್ನ ಸ್ಕಾರ್ಫ್ ಅನ್ನು ತೆಗೆದುಹಾಕುವಂತೆ ಶಿಕ್ಷಕರು ಹೇಳಿದ್ದಾರೆ ಎಂದು ಆರೋಪಿಸಿದ್ದಳು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

hijab 1

ಸದ್ಯ ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮನೀಶ್ ಸಿಸೋಡಿಯಾ ಅವರು, ಎಎಪಿ ಸರ್ಕಾರವು ಎಲ್ಲಾ ಸಂಪ್ರದಾಯಗಳನ್ನು ಗೌರವಿಸುತ್ತದೆ. ಎಲ್ಲಾ ಧರ್ಮಗಳು ಮತ್ತು ಜಾತಿಗಳ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಗೌರವದಿಂದ ನಡೆಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

ದೆಹಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲು ಅತ್ಯುತ್ತಮ ವ್ಯವಸ್ಥೆ ಇದೆ. ಈ ಸಮಸ್ಯೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸಲಾಗುತ್ತಿದೆ. ನಮ್ಮ ಶಾಲೆಗಳಲ್ಲಿ ಎಲ್ಲಾ ಧರ್ಮ ಮತ್ತು ಜಾತಿಯ ವಿದ್ಯಾರ್ಥಿಗಳನ್ನು ಗೌರವದಿಂದ ನಡೆಸಿಕೊಳ್ಳಲಾಗುತ್ತದೆ. ನಮ್ಮ ಕಡೆಯಿಂದ ಅವರ ಸಂಪ್ರದಾಯಗಳಿಗೆ ಯಾವುದೇ ನಿರ್ಬಂಧಗಳಿಲ್ಲ. ಈ ಘಟನೆ ಹೇಗೆ ಸಂಭವಿಸಿತು ಎಂದು ನಾನು ಸಹ ವಿಚಾರಿಸಿದೆ. ಆದರೆ ಇಲ್ಲಿಯವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಸದ್ಯ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಹಿಜಬ್ ಧರಿಸಿರುವ ಬಾಲಕಿ, ಶಿಕ್ಷಕರು ಈ ಸ್ಕಾರ್ಫ್ ಧರಿಸಿ ತರಗತಿಗೆ ಬರಬೇಡಿ ಎಂದಿದ್ದಾರೆ. ನಿಮ್ಮ ತಾಯಿಯಂತೆ ನೀವು ಆಗಬೇಡಿ. ಸ್ಕಾರ್ಫ್ ಧರಿಸಿ ಶಾಲೆಗೆ ಬರಬೇಡಿ ಎಂದರು. ಅಲ್ಲದೇ ಇಬ್ಬರು-ಮೂವರು ಹುಡುಗಿಯರಿಗೆ ತಮ್ಮ ತಲೆಯ ಮೇಲಿನ ಸ್ಕಾರ್ಫ್ ತೆಗೆಯುವಂತೆ ತಿಳಿಸಿದ್ದರು ಎಂದು ಆರೋಪಿಸಿದ್ದಾಳೆ. ಆದರೆ ಈ ಕುರಿತಂತೆ ಶಾಲಾ ಅಧಿಕಾರಿಗಳು ವಿದ್ಯಾರ್ಥಿನಿಯ ಪೋಷಕರೊಂದಿಗೆ ಚರ್ಚಿಸಿದ್ದು, ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 1 ರಂದು ಕರ್ನಾಟಕದ ಉಡುಪಿ ಕಾಲೇಜಿಗೆ ಹಿಜಬ್ ಧರಿಸಿ ಬಂದ ಆರು ವಿದ್ಯಾರ್ಥಿನಿಯರಿಗೆ ಅಧಿಕಾರಿಗಳು ಪ್ರವೇಶವನ್ನು ನಿರಾಕರಿಸಿದರು. ಈ ವೇಳೆ ತರಗತಿಗೆ ಹಿಜಬ್ ಧರಿಸಿ ಹಾಜರಾಗಲು ಪ್ರಾಂಶುಪಾಲರಿಗೆ ವಿದ್ಯಾರ್ಥಿನಿಯರು ಮನವಿ ಮಾಡಿದರು. ಇದಾದ ಬಳಿಕ ರಾಜ್ಯದಲ್ಲಿ ಕೇಸರಿ ಶಾಲು ಹಾಗೂ ಹಿಜಬ್ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿತು. ಇದನ್ನೂ ಓದಿ:  Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?

Share This Article
Leave a Comment

Leave a Reply

Your email address will not be published. Required fields are marked *