Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿಸುತ್ತಿರುವ ಎಸ್.ಆರ್.ವಿಶ್ವನಾಥ್ ವಿರುದ್ಧ AAP ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿಸುತ್ತಿರುವ ಎಸ್.ಆರ್.ವಿಶ್ವನಾಥ್ ವಿರುದ್ಧ AAP ಆಕ್ರೋಶ

Bengaluru City

ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿಸುತ್ತಿರುವ ಎಸ್.ಆರ್.ವಿಶ್ವನಾಥ್ ವಿರುದ್ಧ AAP ಆಕ್ರೋಶ

Public TV
Last updated: January 19, 2022 4:30 pm
Public TV
Share
2 Min Read
SR VISHWANATH
SHARE

ಬೆಂಗಳೂರು: ದೊಡ್ಡಬೆಟ್ಟಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿ ಪರಿವರ್ತಿಸುತ್ತಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನಡೆಗೆ ಆಮ್ ಆದ್ಮಿ ಪಾರ್ಟಿ (AAP) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

AAP

ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಎಎಪಿ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ, ಯಲಹಂಕ ವಿಧಾನಸಭಾ ಕ್ಷೇತ್ರದ ದೊಡ್ಡಬೆಟ್ಟಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಮೂರೂವರೆ ವರ್ಷಗಳಿಂದ ಮುಚ್ಚಲ್ಪಟ್ಟಿತ್ತು. ಸ್ಥಳೀಯರ ಅಪೇಕ್ಷೆಯಂತೆ ಆಮ್ ಆದ್ಮಿ ಪಾರ್ಟಿಯು ಇದನ್ನು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದು, ಆರೋಗ್ಯ ಕೇಂದ್ರವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿತ್ತು. ಪಾಳು ಬಿದ್ದಿದ್ದ ಕಟ್ಟಡವನ್ನು ಸ್ವಚ್ಛಗೊಳಿಸಿ ಕೊಟ್ಟಿದ್ದೆವು. ಆದರೆ ಈಗ ಆರೋಗ್ಯ ಕೇಂದ್ರವನ್ನು ತೆರೆಯುವ ಬದಲು ಅದನ್ನು ನಿರಾಶ್ರಿತರ ಕೇಂದ್ರವನ್ನಾಗಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

ಶಾಸಕ ಎಸ್.ಆರ್.ವಿಶ್ವನಾಥ್‍ರವರು ಈ ವಿಚಾರವನ್ನು ರಾಜಕೀಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆರೋಗ್ಯ ಕೇಂದ್ರ ಪುನರಾರಂಭಿಸಿದರೆ ಆಮ್ ಆದ್ಮಿ ಪಾರ್ಟಿಯ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗುತ್ತದೆ ಎಂಬ ಒಂದೇ ಒಂದು ಕಾರಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಕೀಳುಮಟ್ಟದ ರಾಜಕೀಯದಿಂದಾಗಿ ದೊಡ್ಡಬೆಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಜನರು ಆರೋಗ್ಯ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಕೋವಿಡ್ ಆತಂಕದ ಸಂದರ್ಭದಲ್ಲೂ ರೋಗಿಗಳು ನೂರು ರೂಪಾಯಿಗೂ ಹೆಚ್ಚು ಖರ್ಚು ಮಾಡಿಕೊಂಡು ದೂರದ ಆಸ್ಪತ್ರೆಗಳಿಗೆ ಪ್ರಯಾಣಿಸಬೇಕಾಗಿದೆ ಎಂದು ಬಿ.ಟಿ.ನಾಗಣ್ಣ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸುಹಾಸಿನಿ ಫಣಿರಾಜ್ ಮಾತನಾಡಿ, ಸ್ಥಳೀಯ ಶಾಸಕರನ್ನು ಎದುರುಹಾಕಿಕೊಂಡು ಆರೋಗ್ಯ ಕೇಂದ್ರ ಮುಂದುವರಿಸಲು ಸಾಧ್ಯವಿಲ್ಲವೆಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದಾರೆ. ಶಾಸಕರಿಗೆ ಹೆದರಿ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಸ್ಥಿತಿಯಲ್ಲಿ ಅಧಿಕಾರಿಗಳಿರುವುದು ನಿಜಕ್ಕೂ ದುರಂತ. ಬಡ ಹಾಗೂ ಮಧ್ಯಮ ವರ್ಗದ ಜನರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದ ರಾಜಕಾರಣಿ ಎಂದರೆ ಅದು ಎಸ್.ಆರ್.ವಿಶ್ವನಾಥ್. ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಆರೋಗ್ಯ ಕೇಂದ್ರದಿಂದ ಜನರಿಗೆ ಯಾವುದೇ ಲಾಭ ಸಿಗದಂತೆ ಮಾಡುತ್ತಿದ್ದಾರೆ. ಬಿಡಿಎಯಲ್ಲಿ ಭ್ರಷ್ಟಾಚಾರ ಮಾಡುವುದಕ್ಕಷ್ಟೇ ಅವರು ಯೋಗ್ಯರು. ಇದನ್ನು ಆರೋಗ್ಯ ಕೇಂದ್ರವನ್ನಾಗಿಯೇ ಮುಂದುವರಿಸಿ, ನಿರಾಶ್ರಿತರ ಕೇಂದ್ರವನ್ನು ಬೇರೆಡೆ ತೆರೆಯಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: UP Election- 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಯಲಹಂಕ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡರಾದ ನಿತಿನ್ ರೆಡ್ಡಿ ಹಾಗೂ ಸ್ಥಳೀಯ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

TAGGED:aapGovernment hospitalS. R. Vishwanathಆರೋಗ್ಯ ಕೇಂದ್ರಎಎಪಿಎಸ್.ಆರ್ ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
12 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
48 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
53 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?