ಆಪ್ ಹಿರಿಯ ನಾಯಕ ಅಶುತೋಷ್ ರಾಜೀನಾಮೆ

Public TV
1 Min Read
AAP ASHUTHOSH

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ವಕ್ತಾರರಾಗಿರುವ ಹಿರಿಯ ಮುಖಂಡ ಅಶುತೋಷ್ ದಿಢೀರ್ ಬೆಳವಣಿಗೆಯೊಂದರಲ್ಲಿ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಇಲ್ಲಿಯವರೆಗೂ ಸಾಗಿದ ಎಎಪಿಯಲ್ಲಿನ ನನ್ನ ಪಯಣವು ಇಂದಿಗೆ ಮುಕ್ತಾಯಗೊಳ್ಳುತ್ತಿದೆ. ಇದರಿಂದಾಗಿ ಸುಂದರ ಹಾಗೂ ಕ್ರಾಂತಿಕಾರಿ ಕಾರ್ಯಗಳು ನಿಲ್ಲಲಿದೆ. ಪಕ್ಷವು ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕಾಗಿ ನಾನು ಕೇಳಿಕೊಳ್ಳುತ್ತೇನೆ. ಕೇವಲ ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ಪಕ್ಷದಲ್ಲಿ ನನ್ನನ್ನು ಬೆಂಬಲಿಸಿ ಸಹಕರಿಸಿದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೂ ನಾನು ಈ ಮೂಲಕ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ, ಮಾಧ್ಯಮಗಳು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸಬೇಕು. ಮಾಧ್ಯಮ ಮಿತ್ರರೇ ಈ ಕುರಿತು ನಾನು ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ, ದಯಮಾಡಿ ಸಹಕರಿಸಿ ಎಂದು ಹೇಳಿದ್ದಾರೆ.

ಅಶುತೋಷ್‍ರವರು ಮೂಲತಃ ಪತ್ರಕರ್ತರಾಗಿದ್ದು, ಬದಲಾದ ಸನ್ನಿವೇಷಗಳಲ್ಲಿ ಅವರು ರಾಜಕೀಯಕ್ಕೆ ಧುಮುಕಿದ್ದರು. ಅಲ್ಲದೇ 2014ರ ಲೋಕಸಭಾ ಚುನಾವಣೆಯಲ್ಲಿ ಎಎಪಿಯಿಂದ ಚಾಂದಿನಿಚೌಕ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಎಎಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಹು ಆಪ್ತರಲ್ಲಿ ಗುರುತಿಸಿಕೊಂಡವರಲ್ಲಿ ಒಬ್ಬರಾಗಿದ್ದರು.

ಎಎಪಿಯಿಂದ ರಾಜ್ಯಸಭೆಗೆ ಮೂವರು ಸದಸ್ಯರ ಆಯ್ಕೆ ಪ್ರಕ್ರಿಯೆಯಲ್ಲಿ ಇಬ್ಬರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅವರು ಹಲವು ದಿನಗಳ ಕಾಲ ಮೌನಕ್ಕೆ ಶರಣಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *