ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ (Excise Policy Case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ (ED) ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಎಎಪಿ ನಾಯಕಿ, ಸಚಿವೆ ಅತಿಶಿ ಮರ್ಲೆನಾ (Atishi Marlena) ಆತಂಕಪಟ್ಟಿದ್ದಾರೆ.
ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸಮನ್ಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಉನ್ನತ ನಾಯಕರನ್ನು ಜೈಲಿಗೆ ಕಳುಹಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನೇ ಮುಗಿಸಲು ಪ್ರಯತ್ನಿಸುತ್ತಿದೆ. ಚುನಾವಣೆಯಲ್ಲಿ ಕೇಜ್ರಿವಾಲ್ ಅವರನ್ನ ಸೋಲಿಸಲು ಸಾಧ್ಯವಾಗದ ಕಾರಣ ಬಿಜೆಪಿ ಎಎಪಿ ವಿರುದ್ಧ ಇಂತಹ ತಂತ್ರಗಳನ್ನು ಬಳಸುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ
ನವೆಂಬರ್ 2 ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎನ್ನುವ ಮಾಹಿತಿ ಬಂದಿದೆ. ಅವರನ್ನು ಬಂಧಿಸಿದರೆ ಅದು ಭ್ರಷ್ಟಾಚಾರದ ಆರೋಪ ಕಾರಣವಲ್ಲ, ಅವರು ಬಿಜೆಪಿ (BJJP) ವಿರುದ್ಧ ಮಾತನಾಡಿದ್ದಕ್ಕೆ ಪ್ರತಿಕಾರ ಎನ್ನಬಹುದು. ಈಗಾಗಲೇ ಎಎಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಬಿಜೆಪಿಯನ್ನ ಸೋಲಿಸಿದೆ, ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯಲ್ಲೂ ಸೋಲಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕೇಜ್ರಿವಾಲ್ ಅವರನ್ನ ಕಂಡರೆ ಭಯವಿದೆ. ಹಾಗಾಗಿ ಅಬರನ್ನು ಬಂಧಿಸುವ ತಂತ್ರ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ತನ್ನ ಕಚೇರಿಯಲ್ಲಿ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಕೇಂದ್ರದಿಂದ ಐಫೋನ್ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ
Web Stories