ನವದೆಹಲಿ: ಆಪ್ ಸಂಸದ ಸಂಜಯ್ ಸಿಂಗ್ (Sanjay Singh) ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸುದೀರ್ಘ ಶೋಧದ ಬಳಿಕ ಇದೀಗ ಅಧಿಕಾರಿಗಳು ಸಂಸದರನ್ನು ಅರೆಸ್ಟ್ ಮಾಡಿದ್ದಾರೆ.
ಹೊಸ ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆ ಅವರ ನಿವಾಸದಲ್ಲಿ 10 ಗಂಟೆಗಳ ಕಾಲ ವಿಚಾರಣೆ ನಡೆಸಿತು. ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ
ಈ ಹಿಂದೆ ಪ್ರಕರಣದಲ್ಲಿ ಎಎಪಿ ಸಂಸದರಿಗೆ ನಿಕಟವಾಗಿರುವ ಹಲವರ ನಿವೇಶನಗಳನ್ನು ಶೋಧ ನಡೆಸಲಾಗಿತ್ತು.
Web Stories