ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಾಳೆ ಘೋಷಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಪಂಜಾಬ್‍ನಲ್ಲಿ ಎಎಪಿ ಪಕ್ಷದ ಸಿಎಂ ಅಭ್ಯರ್ಥಿಯಾಗಿ ಭಗವಂತ್ ಮಾನ್ ಅವರ ಹೆಸರನ್ನು ಘೋಷಿಸಬಹುದು ಎಂಬ ಗಾಳಿ ಸುದ್ದಿ ಹರಿದಾಡುತ್ತಿದ್ದು, ಪಂಜಾಬ್ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂದು ಗುರುವಾರ ಅರವಿಂದ್ ಕೇಜ್ರಿವಾಲ್ ಅವರು ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಆದರೆ ಈ ಹುದ್ದೆಗೆ ನಾನು ಆಯ್ಕೆ ಮಾಡುವುದು ಭಗವಂತ್ ಮಾನ್ ಎಂದಿದ್ದರು. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ
Punjab CM face will be announced tomorrow at 12pm: AAP national convenor Arvind Kejriwal pic.twitter.com/4oX3NBAiZI
— ANI (@ANI) January 17, 2022
ಎಎಪಿ ಜನತಾ ಚುನೇಗಿ ಅಪ್ನಾ ಸಿಎಂ ಅಭಿಯಾನವನ್ನು ಪ್ರಾರಂಭಿಸಿದ್ದು, ಜನರ ಪ್ರತಿಕ್ರಿಯೆಯನ್ನು ಪಡೆದ ನಂತರ ಉನ್ನತ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಅಭಿಯಾನಕ್ಕೆ ಇಲ್ಲಿಯವರೆಗೂ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
ಎಎಪಿ ಪಕ್ಷವು ಮೊಬೈಲ್ ನಂಬರ್‍ವೊಂದನ್ನು ಬಿಡುಗಡೆಗೊಳಿಸಿದ್ದು, ಸೋಮವಾರ ಸಂಜೆ 5 ಗಂಟೆಯವರೆಗೆ ಜನರು ತಮ್ಮ ಧ್ವನಿಯನ್ನು ರೆಕಾರ್ಡ್ ಮಾಡುವ ಮೂಲಕ ಮತ್ತು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂದು ವಾಟ್ಸಾಪ್ ಮೂಲಕ ಸಂದೇಶಗಳನ್ನು ಕಳುಹಿಸಿ ಅಭಿಪ್ರಾಯವನ್ನು ನೀಡಬಹುದು ಎಂದು ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯು 117 ಸ್ಥಾನಗಳಿಗೆ ಫೆಬ್ರವರಿ 14 ರಂದು ಮೊದಲನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.