ಚಂಡೀಗಢ: ದೆಹಲಿಯಲ್ಲಿ ಎಎಪಿ (AAP) ಹೀನಾಯ ಸೋಲಿನ ಬಳಿಕ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಪಂಜಾಬ್‌ನಲ್ಲಿ (Punjab) ಸಿಎಂ ಹಾಗೂ ಆಪ್ ಶಾಸಕರನ್ನು ಭೇಟಿಯಾಗಿದ್ದಾರೆ. ಈ ಬೆನ್ನಲ್ಲೇ, ಪಂಜಾಬ್ ಸಿಎಂ ಬದಲಾಗ್ತಾರಾ ಎಂಬ ಚರ್ಚೆ ಶುರುವಾಗಿದೆ.
ದೆಹಲಿಯಲ್ಲಿ ನಡೆದ ಎಎಪಿ ಸಭೆಯಲ್ಲಿ ಕೇಜ್ರಿವಾಲ್, ಹಿರಿಯ ನಾಯಕ ಮನೀಶ್ ಸಿಸೋಡಿಯಾ ಮತ್ತು ಎಲ್ಲಾ ಪಂಜಾಬ್ ಶಾಸಕರು ಮತ್ತು ಪಕ್ಷದ ಇತರ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ರಣವೀರ್ ಅಲಹಾಬಾದಿಯಾ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ದೂರು
ರಾಷ್ಟ್ರ ರಾಜಧಾನಿಯ ಕಪುರ್ತಲಾ ಹೌಸ್‌ನಲ್ಲಿ ನಡೆದ ಪಂಜಾಬ್ ಶಾಸಕರ ಸಭೆ ಗಮನ ಸೆಳೆದಿತ್ತು. ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಲು ಕೇಜ್ರಿವಾಲ್ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ರಾಜೌರಿ ಗಾರ್ಡನ್‌ನಿಂದ ಹೊಸದಾಗಿ ಆಯ್ಕೆಯಾದ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ, ಭಗವಂತ್ ಮಾನ್ ಅವರಿಗೆ ‘ಅಸಮರ್ಥ’ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಸೋತ ನಂತರ, ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆ ಕರೆದಿದ್ದಾರೆ. ಭಗವಂತ್ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಮಹಿಳೆಯರಿಗೆ 1,000 ರೂ. ನೀಡುವ ಭರವಸೆಯನ್ನು ಅವರು ಈಡೇರಿಸಲು, ಮಾದಕ ದ್ರವ್ಯ ಸೇವನೆಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಪಂಜಾಬ್‌ನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದ್ದಾರೆ. ಈಗ, ಅವರು ಎಲ್ಲಾ ವೈಫಲ್ಯವನ್ನು ಭಗವಂತ್ ಮಾನ್ ಅವರ ಮೇಲೆ ಹಾಕಲು ಬಯಸುತ್ತಾರೆ. ಕೇಜ್ರಿವಾಲ್ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅವರು AAP ಪಂಜಾಬ್ ಶಾಸಕರನ್ನು ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಧ್ಯಕ್ಷರ ಬದಲಾವಣೆ ಚರ್ಚೆ – ಅಮಿತ್ ಶಾ ಭೇಟಿಯಾದ ಸೋಮಣ್ಣ
ಈ ಹೇಳಿಕೆಯ ಬಗ್ಗೆ ಮಾನ್ ಅವರು ನಗುಬೀರಿದ್ದಾರೆ. ‘ಅವರು ಹೇಗೆ ಬೇಕಾದರೂ ಮಾತನಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಪಂಜಾಬ್ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ನೀಡುವ ಭರವಸೆಯನ್ನು ಈಡೇರಿಸುತ್ತದೆ ಎಂದು ಸಿಎಂ ತಿಳಿಸಿದ್ದಾರೆ.