ನವದೆಹಲಿ: ಸಕಾಲಕ್ಕೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯನ್ನು ನಡೆಸದ ವಿಚಾರವಾಗಿ ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಯನ್ನು ಸಕಾಲಕ್ಕೆ ನಡೆಸಿ ಬಿಜೆಪಿ ಗೆಲುವು ಸಾಧಿಸಿದರೆ ಆಮ್ ಆದ್ಮಿ ಪಕ್ಷ ರಾಜಕೀಯವನ್ನು ತ್ಯಜಿಸುತ್ತದೆ ಎಂದು ಸವಾಲು ಹಾಕಿದ್ದಾರೆ.
Advertisement
ದೆಹಲಿಯ ಮೂರು ಮಹಾನಗರ ಪಾಲಿಕೆ (ಪೂರ್ವ, ಉತ್ತರ, ದಕ್ಷಿಣ) ವಿಲೀನಗೊಳಿಸಲು ಏಕೀಕರಣ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ದಿದಿ ನಾಡಿನಲ್ಲೇ ಹಿಂಸಾಚಾರ – ಹೆದರಿ ಮನೆ ತೊರೆಯುತ್ತಿರುವ ಜನರು
Advertisement
ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಗೆ ಸಣ್ಣ ಚುನಾವಣೆಯಲ್ಲಿ ಅತಿ ಚಿಕ್ಕದಾದ ಪಕ್ಷದ ಬಗ್ಗೆ ಭಯವಾಗುತ್ತಿದೆ. ಪಾಲಿಕೆ ಚುನಾವಣೆಯನ್ನು ಸಕಾಲಕ್ಕೆ ನಡೆಸುವ ಧೈರ್ಯ ಬಿಜೆಪಿಗೆ ಇದೆಯೇ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
Advertisement
Advertisement
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಂದೂಡಿರುವುದು, ಬ್ರಿಟಿಷರನ್ನು ದೇಶದಿಂದ ಓಡಿಸಿ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪಿಸಲು ತ್ಯಾಗ-ಬಲಿದಾನ ಮಾಡಿದ ಹುತಾತ್ಮರಿಗೆ ಮಾಡಿದ ಅವಮಾನ. ಇಂದು ಸೋಲಿನ ಭಯದಿಂದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡುತ್ತಿದ್ದಾರೆ. ಅವರು ರಾಜ್ಯಗಳು ಮತ್ತು ದೇಶದ ಚುನಾವಣೆಗಳನ್ನು ಮುಂದೂಡುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ