ನವದೆಹಲಿ : ಮಹಾನಗರ ಪಾಲಿಕೆ ಮೇಯರ್ (Delhi Mayor) ಚುನಾವಣೆ ಅಂತ್ಯವಾಗಿದ್ದು, ಆಮ್ ಆದ್ಮಿ ಅಭ್ಯರ್ಥಿ ಶೆಲ್ಲಿ ಒಬೆರಾಯ್ (Shelly Oberoi) ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಒಟ್ಟು 150 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ರೇಖಾ ಗುಪ್ತಾ ಅವರನ್ನು 34 ಮತಗಳ ಅಂತರದಿಂದ ಸೋಲಿಸಿದರು.
ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ನೀಡುವ ವಿಚಾರವಾಗಿ ಬಿಜೆಪಿ (BJP) ಮತ್ತು ಆಪ್ (AAP) ತಿಕ್ಕಾಟದಿಂದ ಮೂರು ಬಾರಿ ಮೇಯರ್ ಚುನಾವಣೆ ಮುಂದೂಡಿಕೆಯಾಗಿತ್ತು. ಬಳಿಕ ಆಪ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸದಂತೆ ಸೂಚನೆ ನೀಡಿ ಕೂಡಲೇ ಚುನಾವಣೆ ನಡೆಸಬೇಕು ಎಂದು ಸೂಚನೆ ನೀಡಿತ್ತು.
ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಇಂದು ಮೇಯರ್ ಆಯ್ಕೆಗೆ ಚುನಾವಣೆ ನಡೆದಿತ್ತು. 266 ಮತಗಳಲ್ಲಿ ರೇಖಾ ಗುಪ್ತಾ 116 ಮತಗಳನ್ನು ಪಡೆದರೆ, ಶೆಲ್ಲಿ ಒಬೆರಾಯ್ 150 ಮತಗಳನ್ನು ಪಡೆಯುವ ಮೂಲಕ ಗೆಲವು ಸಾಧಿಸಿದರು. ಬಳಿಕ ಮಾತನಾಡಿದ ಅವರು, ನಾನು ಈ ಸದನವನ್ನು ಸಾಂವಿಧಾನಿಕ ರೀತಿಯಲ್ಲಿ ನಡೆಸುತ್ತೇನೆ ಎಂದು ಭರವಸೆ ನೀಡುತ್ತೇನೆ. ನೀವೆಲ್ಲರೂ ಸದನದ ಘನತೆಯನ್ನು ಕಾಪಾಡುತ್ತೀರಿ ಮತ್ತು ಅದರ ಸುಗಮ ಕಾರ್ಯನಿರ್ವಹಣೆಯಲ್ಲಿ ಸಹಕರಿಸುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಗ್ರಾಮಗಳ ಆಸ್ತಿ ಸರ್ವೆಗೆ ಡ್ರೋಣ್ ಸರ್ವೆ ಪ್ರಕ್ರಿಯೆ ನಡೆಯುತ್ತಿದೆ: ಅಶೋಕ್
ಮೇಯರ್ ಆಯ್ಕೆ ಬಳಿಕ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia), ಸೌರಭ್ ಭಾರದ್ವಾಜ್ ಟ್ವೀಟ್ ಮಾಡಿ ಶೆಲ್ಲಿ ಒಬೆರಾಯ್ ಅವರಿಗೆ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್‌ನಿಂದ ಮೃತರಾದ ಕುಟುಂಬಕ್ಕೆ 446 ಕೋಟಿ ಪರಿಹಾರ ನೀಡಲಾಗಿದೆ: ಆರ್ ಅಶೋಕ್
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k