ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ (Gujarat Election) ಆಮ್ ಆದ್ಮಿ ಪಕ್ಷದ (AAP) ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಇಸುದನ್ ಗಧ್ವಿ (Isudan Gadhvi) ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ.
ಗುಜರಾತ್‌ನಲ್ಲಿ ಎಎಪಿ ಸಿಎಂ ಅಭ್ಯರ್ಥಿಯಾಗಿದ್ದ ಇಸುದನ್ ಗಧ್ವಿ ಅವರು ಖಂಭಾಲಿಯಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ 18,000 ಕ್ಕೂ ಹೆಚ್ಚು ಮತಗಳಿಂದ ಸೋತಿದ್ದಾರೆ. ಇದನ್ನೂ ಓದಿ: Gujarat Election Result: ಜಿಗ್ನೇಶ್ ಮೇವಾನಿಗೆ ಜಯ
ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್‌ನ ಹಾಲಿ ಶಾಸಕ ವಿಕ್ರಮ್ ಮೇಡಂ ಅವರಿಗಿಂತ ಗಾಧ್ವಿ ಮುನ್ನಡೆ ಸಾಧಿಸಿದ್ದರು. ಬಿಜೆಪಿಯ ಮುಲುಭಾಯ್ ಬೇರಾ ಮೂರನೇ ಸ್ಥಾನದಲ್ಲಿದ್ದರು. ಆದರೆ ನಂತರದ ಸುತ್ತಿನ ಮತ ಎಣಿಕೆಯಲ್ಲಿ ಬೇರಾ ತಮ್ಮ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದಾರೆ.
ಗುಜರಾತ್‌ನಲ್ಲಿ ಬಿಜೆಪಿ (BJP) ದಾಖಲೆಯ ಗೆಲುವು ಸಾಧಿಸಿದೆ. ಈ ಗೆಲುವಿನ ಭಾಗವಾಗಿ ಗುಜರಾತ್‌ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ ಗೆಲುವು