ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ (AB de Villiers) ಮುಂಬೈನ (Mumbai) ಗಲ್ಲಿಯಲ್ಲಿ ಕ್ರಿಕೆಟ್ (Street Cricket) ಆಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ.
ಕೆಲ ದಿನಗಳ ಹಿಂದೆ 2023ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಎಬಿಡಿ ಬೆಂಗಳೂರಿಗೆ ಆಗಮಿಸಿ ಫ್ರಾಂಚೈಸ್ ಜೊತೆ ಕಾಣಿಸಿಕೊಂಡಿದ್ದರು. ಅದಕ್ಕೂ ಮೊದಲು ಕಾಂತರ ನಿರ್ದೇಶಕ, ನಟ ರಿಷಬ್ ಶೆಟ್ಟಿಯನ್ನು ಭೇಟಿ ಆಗಿರುವ ಫೋಟೋವೊಂದು ವೈರಲ್ ಆಗಿತ್ತು. ಇದೀಗ ಮುಂಬೈನ ಗಲ್ಲಿಯೊಂದರಲ್ಲಿ ಕ್ರಿಕೆಟ್ ಆಡುತ್ತಾ ಮಸ್ತಿ ಮಾಡುತ್ತಿರುವ ವೀಡಿಯೋವೊಂದು ಹರಿದಾಡುತ್ತಿದೆ.
Advertisement
AB De Villiers playing street cricket with fans in Mahalaxmi, Mumbai. pic.twitter.com/diVDLx86BH
— Mufaddal Vohra (@mufaddal_vohra) November 7, 2022
Advertisement
ಟ್ವಿಟ್ಟರ್ ಬಳಕೆದಾರನೊಬ್ಬ ಎಬಿಡಿ ಅಭಿಮಾನಿಗಳ ಜೊತೆಗೆ ಕ್ರಿಕೆಟ ಆಡುತ್ತಿರುವ 2 ವೀಡಿಯೋವನ್ನು ಹಂಚಿಕೊಂಡಿದ್ದಾನೆ. ಮೊದಲನೇ ವೀಡಿಯೋದಲ್ಲಿ ಮುಂಬೈನ ಮಹಾಲಕ್ಷ್ಮಿ ಗಲ್ಲಿಯೊಂದರಲ್ಲಿ ಅಭಿಮಾನಿಯೊಬ್ಬರು ಎಸೆದ ಬೌಲ್‍ಗೆ ಎಬಿಡಿ ವಿಲಿಯರ್ಸ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಂತರ ಅಭಿಮಾನಿಗಳಿಂದ ಔಟ್ ಆಗುತ್ತಾರೆ. ಹಾಗೆಯೇ ಮತ್ತೊಂದು ವೀಡಿಯೋದಲ್ಲಿ ಕೀಪರ್ ಆಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಲೆಮಾರಿ ರಾಜಕಾರಣಿ, ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ
Advertisement
❤️???? pic.twitter.com/tNUyr74BqJ
— Prashant _17???? (@ineffable_1817) November 7, 2022
Advertisement
ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಇದೀಗ ಹೊಸ ರೋಲ್‍ನಲ್ಲಿ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಎಬಿಡಿ ಬೆಂಗಳೂರಿಗೆ ಆಗಮಿಸಿ ಫ್ರಾಂಚೈಸ್ ಜೊತೆ ಆಟಗಾರರ ರಿಲೀಸ್ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಎಬಿಡಿ 16ನೇ ಆವೃತ್ತಿ ಐಪಿಎಲ್‍ನಲ್ಲಿ ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರತಿ ಟನ್ ಕಬ್ಬಿಗೆ 3600 ರೂ. MSP ನಿಗದಿ ಪಡಿಸಿ