ಮಡಿಕೇರಿ: ಕೊಡಗು ಜಿಲ್ಲೆಯಲ್ಲಿದ್ದ ವೀಕೆಂಡ್ ಕರ್ಫ್ಯೂನ್ನು ಕಳೆದ ವಾರದಿಂದ ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನೆಡೆಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಬಹುತೇಕ ಪ್ರವಾಸಿತಾಣದಲ್ಲಿ ಇದೀಗ ಪ್ರವಾಸಿಗರೇ ತುಂಬಿದ್ದು, ಪ್ರವಾಸೋದ್ಯಮದಲ್ಲಿ ತುಸು ಚೇತರಿಕೆ ಕಂಡು ಬಂದಿದೆ. ಆದರೆ ಕೊರೊನಾ ನಿಯಮಗಳನ್ನು ಮಾತ್ರ ಪ್ರವಾಸಿಗರು ಪಾಲಿಸುತ್ತಿಲ್ಲ.
Advertisement
ಕೊಡಗಿನ ದುಬಾರೆ, ಕಾವೇರಿ ನಿಸರ್ಗ ಧಾಮ, ಮಡಿಕೇರಿ ರಾಜಾಸೀಟು, ಅಬ್ಬಿ ಫಾಲ್ಸ್, ಮಾಂದಲ್ ಪಟ್ಟಿ, ಮಲ್ಲಳ್ಳಿ ಜಲಪಾತಗಳ ಕಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಿದ್ದಾರೆ. ಇದೀಗ ಮಳೆ ಕೂಡ ಇಳಿಕೆಯಾಗಿರುವ ಕಾರಣ ಮಳೆ ಅವಾಂತರದ ಆತಂಕವೂ ದೂರವಾಗಿದೆ. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕೊಡಗಿನ ಕಡೆ ಧಾವಿಸುತ್ತಿದ್ದಾರೆ. ಜಿಲ್ಲೆಗೆ ಬರುವ ಪ್ರವಾಸಿಗರು ಕೋವಿಡ್ ನಿಯಮಗಳನ್ನು ಮರೆತು ಎಂಜಾಯ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ
Advertisement
Advertisement
ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡದೆ ಫೋಟೋಗಳನ್ನು ಕ್ಲೀಕಿಸುತ್ತ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಪ್ರವಾಸಿಗರಿಗೆ ಕೋವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಅಥವಾ ಪೊಲೀಸರು ಇಲ್ಲದೇ ಇರುವುದರಿಂದ ಜಿಲ್ಲೆಯ ಬಹುತೇಕ ಪ್ರವಾಸಿ ತಾಣದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಅಗುತ್ತಿದೆ. ಇದನ್ನೂ ಓದಿ: ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿ
Advertisement
ಕೋವಿಡ್ ನಿಯಮಗಳನ್ನು ಪಾಲನೆ ಮಾಡುವಂತೆ ಪ್ರವಾಸಿಗರಿಗೆ ಸ್ಥಳೀಯ ಗ್ರಾಮ ಪಂಚಾಯತಿಗಳ ಸಿಬ್ಬಂದಿ ಸಹ ತಿಳಿ ಹೇಳಬೇಕಿದೆ. ಸಿಬ್ಬಂದಿ ಇಲ್ಲದಿರುವುದರಿಂದ ಹೋರ ರಾಜ್ಯ, ಹೋರ ಜಿಲ್ಲೆಯಿಂದ ಬರುವ ಪ್ರವಾಸಿಗರು ನಿಯಮಗಳನ್ನು ಮರೆತು ಮನಸೋಇಚ್ಛೆ ವರ್ತಿಸುತ್ತಾರೆ. ಇದೇ ರೀತಿ ಪ್ರವಾಸಿಗರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ.