ಮಂಗಳೂರು: ಅಬ್ದುಲ್ ರಹೀಂ (Abdul Rahim) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ (Bantwal Rural Police Station) ಪ್ರಕರಣ ದಾಖಲಾಗಿದೆ.
ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್‌ಎಸ್ 103, 109, 118(1), 118(2), 190, 191(1), 191(2), 191(3) ಅಡಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ದೀಪಕ್, ಸುಮಿತ್ ಹೆಸರು ಮಾತ್ರ ಉಲ್ಲೇಖವಾಗಿದ್ದು ಉಳಿದ 13 ಮಂದಿ ಯಾರೂ ಎನ್ನುವುದು ತಿಳಿದು ಬಂದಿಲ್ಲ.
ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ
ದೂರಿನಲ್ಲಿ ಏನಿದೆ?
ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್
ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ನಡೆಸಿದ್ದಾರೆ. ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ.