ಬೆಳಗಾವಿ: ಹಿಂದೂತ್ವ ಮತ್ತು ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ ಎಂದು ಬೆಳಗಾವಿ ಮಹಾನಗರ ಪಾಲಿಕೆ ನೂತನ ಬಿಜೆಪಿ ಸದಸ್ಯರಿಗೆ ಶಾಸಕ ಅಭಯ್ ಪಾಟೀಲ್ ಸಲಹೆ ನೀಡಿದ್ದಾರೆ.
Advertisement
ಬೆಳಗಾವಿಯ ಮಹಾವೀರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅಭಯ್ ಪಾಟೀಲ್, ನಗರಸೇವಕರಿಗೆ ಇಂದು ಸಿಎಂ, ಪಕ್ಷದ ರಾಜ್ಯಾಧ್ಯಕ್ಷರು ಸನ್ಮಾನಿಸುತ್ತಿದ್ದು ನೀವು ಪುಣ್ಯವಂತರು. 1999ರಿಂದ ನಾನು ಬಿಜೆಪಿಯಲ್ಲಿದ್ದೇನೆ. ನನಗೆ ಇನ್ನೂ ಕೂಡ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರು ಬಂದು ಸನ್ಮಾನಿಸಿಲ್ಲ. ನಿಮಗೆ ಇಂದು ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಂದು ಸನ್ಮಾನಿಸುತ್ತಿದ್ದಾರೆ. 1960 ರಿಂದ ಪಕ್ಷ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ ಇಂದು ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಉತ್ತಮವಾದ ಆಡಳಿತ ಮೂಲಕ ಬಿಜೆಪಿ ಪಾಲಿಕೆಯ ಅಭಿವೃದ್ಧಿಯತ್ತ ಗಮನಹರಿಸಲಿದೆ ಎಂದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್
Advertisement
Advertisement
ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಬಿಜೆಪಿ ಪಾಲಿಕೆ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. 35ಜನ ನೂತನ ಸಚಿವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಭೈರತಿ ಬಸವರಾಜ್, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಸಂಸದ ಪ್ರಭಾಕರ್ ಕೋರೆ ಸೇರಿ ಹಲವರು ಉಪಸ್ಥಿತಿರಿದ್ದರು. ಇದನ್ನೂ ಓದಿ: ರೈಲಿಗೆ ದಿವಂಗತ ಸುರೇಶ್ ಅಂಗಡಿ ಹೆಸರಿಡರಲು ಶಿಫಾರಸ್ಸು ಮಾಡ್ತೇನೆ: ಬೊಮ್ಮಾಯಿ
Advertisement