BelgaumDistrictsKarnatakaLatestMain Post

ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ: ಅಭಯ್ ಪಾಟೀಲ್ ವ್ಯಂಗ್ಯ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಮ್ಮದೇ ಸರ್ಕಾರದ ವಿರುದ್ಧ ನಗರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಅದು ಆಗೋದಲ್ಲ, ಹೋಗೋದಲ್ಲ. ನನಗೆ ಮಂತ್ರಿ ಸ್ಥಾನ ಕೊಡೋದು, ಬಿಡೋದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.

ನನಗೆ ಸಿಎಂ ಬುಲಾವ್ ಅನ್ನೋದು ತಪ್ಪು. ಎಲ್ಲ ಶಾಸಕರಿಗೂ ಊಟಕ್ಕೆ ಕರೆದಿದ್ದರು. ಹೀಗಾಗಿ ಊಟ ಮಾಡಿ ಬಂದಿದ್ದೇವೆ. ಮೂರು ಸ್ವೀಟ್, ರೊಟ್ಟಿ ಜೊತೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಊಟ ಇತ್ತು ಎಂದು ತಿಳಿಸಿದರು.

ನಮ್ಮ ಸರ್ಕಾರ ಬೆಳಗಾವಿ ಜಿಲ್ಲಾ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ಪ್ರಾಮುಖ್ಯತೆ ನೀಡಿದೆ. ಇನ್ನು, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಮ್ಮ ಗಮನಕ್ಕೆ ಬಂದಿಲ್ಲ. ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.

Leave a Reply

Your email address will not be published.

Back to top button