ಇಂದು ಅಭಿ-ಅವಿವಾ ಆರತಕ್ಷತೆ : ಅಮಿತಾಭ್ ಸೇರಿ ಹಲವರು ಭಾಗಿ ಆಗುವ ನಿರೀಕ್ಷೆ

Public TV
1 Min Read
abhishek ambareesh

ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಆರತಕ್ಷತೆ ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಅದ್ದೂರಿ ಆರತಕ್ಷತೆಗಾಗಿ (Reception) ಅರಮನೆ ಮೈದಾನ ಸಿಂಗಾರಗೊಂಡಿದೆ. ಅಭಿಷೇಕ್ ಮತ್ತು ಅವಿವಾ (Aviva) ಜೋಡಿಗೆ ಹಾರೈಸುವುದಕ್ಕಾಗಿ ಇಂದು ಕೂಡ ದೇಶದ ವಿವಿಧ ಭಾಗಗಳಿಂದ ಗಣ್ಯರು ಬರುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ರಾಜಕೀಯ ಗಣ್ಯರ ದೊಡ್ಡ ಪಟ್ಟಿಯೇ ಹರಿದಾಡುತ್ತಿದೆ.

Sumalatha Abhishek

ಎರಡು ದಿನಗಳ ಹಿಂದೆಯಷ್ಟೇ ನಡೆದ ಮದುವೆ (Wedding) ಸಮಾರಂಭದಲ್ಲಿ ನಟರಾದ ರಜನಿಕಾಂತ್, ಸುದೀಪ್, ಯಶ್,  ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಆಗಮಿಸಿದ್ದರು. ಇದನ್ನೂ ಓದಿ:ಪ್ರಣಿತಾ ಹಾಟ್‌ನೆಸ್‌ಗೆ ಸಂತೂರ್ ಮಮ್ಮಿ ಎಂದ ನೆಟ್ಟಿಗರು

Abhishek 4 1

ಇಂದು ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬಾಲಿವುಡ್ ನ ಖ್ಯಾತ ನಟ ಅಮಿತಾಭ್, ತೆಲುಗಿನ ಖ್ಯಾತ ನಟ ಚಿರಂಜೀವಿ, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವು ಸಚಿವರು ಭಾಗಿಯಾಗುವ ನಿರೀಕ್ಷೆಯಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.

ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಒಂದು ವಾರಗಳಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿದೆ. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ.

Share This Article