– ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಕಾಕ್ರೋಚ್ ಪಾರ್ಟಿ
ನವದೆಹಲಿ: ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ (NEET Exam) ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಆದೇಶ ನೀಡಿದ್ದರು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ(Abhijeet Deepke) ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಇಡಿ, ಸಿಬಿಐ ಸೇರಿದಂತೆ ಕೇಂದ್ರ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಕೇವಲ ವಿರೋಧ ಪಕ್ಷಗಳದ್ದಲ್ಲ, ದೇಶದ ಜನರದ್ದೂ ಆಗಿದೆ ಎಂದು ಹೇಳಿದರು.
ಜುಲೈ 20ರಂದು ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗಕ್ಕೆ ಆದೇಶ ನೀಡಿದ್ದು ಅಮಿತ್ ಶಾ ಅವರೇ ಎಂದು ಆರೋಪಿಸಿದ ದೀಪ್ಕೆ, ಸಿಜೆಪಿಗೆ ವಿದೇಶದಿಂದ ಹಣ ಬರುತ್ತಿದೆ ಎಂದು ಹೇಳುತ್ತಿದ್ದರೆ ಅದು ಸರ್ಕಾರದ ವೈಫಲ್ಯವನ್ನೇ ತೋರಿಸುತ್ತದೆ ಎಂದು ಹೇಳಿದರು.
ಪ್ರಹ್ಲಾದ್ ಜೋಶಿ ಅವರನ್ನು ನೂತನ ಶಿಕ್ಷಣ ಸಚಿವರಾಗಿ ನೇಮಿಸಿರುವುದನ್ನೂ ಅವರು ಪ್ರಶ್ನಿಸಿದರು. ಜೊತೆಗೆ, ಸರ್ಕಾರದ ವಿರುದ್ಧ ನಡೆಯಲಿರುವ ರೈತರ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚೆನ್ನಮ್ಮರ 11ನೇ ದಿನದ ತಿಥಿ ಕಾರ್ಯ – ಪತ್ನಿ ನೆನೆದು ಕಣ್ಣೀರಿಟ್ಟ ಹೆಚ್‌ಡಿಡಿ
ಜಂತರ್ ಮಂತರ್ ಪ್ರತಿಭಟನೆಯ ವೇಳೆ ಕಲ್ಲುಗಳಿಂದ ತುಂಬಿದ್ದ ಟ್ರಕ್‌ಗಳನ್ನು ಪೊಲೀಸರೇ ಸ್ಥಳಕ್ಕೆ ತಂದಿದ್ದರು ಎಂದು ದೀಪ್ಕೆ ಆರೋಪಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟದ ಆರೋಪ ಹೊರಿಸಲು ಈ ರೀತಿಯ ಯೋಜನೆ ರೂಪಿಸಿರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ಈ ಎಲ್ಲ ಆರೋಪಗಳಿಗೆ ಕೇಂದ್ರ ಸರ್ಕಾರ ಅಥವಾ ಗೃಹ ಸಚಿವಾಲಯದಿಂದ ತಕ್ಷಣದ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಇದನ್ನೂ ಓದಿ: ಧಾರಾಕಾರ ಮಳೆಗೆ ಕುಸಿದು ಬಿದ್ದ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ – ಕಳಪೆ ಕಾಮಗಾರಿ ಆರೋಪ
