ಕನ್ನಡದ ಹೆಸರಾಂತ ನಟ ರಂಗಾಯಣ ರಘು ಅವರಿಗೆ ಹೊಸ ಬಿರುದು ನೀಡಿ ಗೌರವಿಸಿದ್ದಾರೆ ಶಾಖಾಹಾರಿ ಚಿತ್ರತಂಡ. ಸಿನಿಮಾದ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ರಂಗಾಯಣ ರಘು ಅವರಿಗೆ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.
Advertisement
ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ನಾನು ಈ ರೀತಿ ಮೈಕ್ ಹಿಡಿದು ಮಾತನಾಡುತ್ತಿದ್ದೇನೆ. ನನ್ನ ನಿರ್ದೇಶಕ ಅಂತಾ ಕರೆಯುತ್ತಾರೆ ಎಂದರೆ. ಈ ಹಿಂದೆ ನಾವು ಯೋಗರಾಜ್ ಮಣಿ ಅಂತಾ ಸಿನಿಮಾ ಮಾಡಬೇಕಾದರೆ ರಘು ಸರ್ ಸಿಕ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜೊತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ದ್ದೂ ದೊಡ್ಡ ಪಾಲು. ನಮ್ಮ ಬರವಣಿಗೆಯನ್ನು ಸ್ಕ್ರೀನ್ ಗೆ ತರುವುದು ಇದೆಯಲ್ಲ. ಅದಕ್ಕೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಘು ಸರ್ ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ? ಅನಿಸುತ್ತೆ ಎಂದರು.
Advertisement
Advertisement
ರಂಗಾಯಣ ರಘು ಮಾತನಾಡಿ, ನನ್ನ ಒಟ್ಟು ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂತಹವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರಿಗೆ ಬಂದು ಸುಮಾರು 35 ವರ್ಷವಾಯ್ತು. ನಾನು ಒಂದ ಸಿನಿಮಾಗೋಸ್ಕರ ಬಂದವನು. 94 ರಿಂದ 2001ರವೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲೆಲ್ಲಾ ಹಾಗೇ ಮಾಡಿದ್ದೇನೆ. ಹೀಗೆ ಮಾಡಿದ್ದೇನೆ ಹೇಳಿಕೊಂಡು ಬರುತ್ತಿದ್ದೆ. ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೇ ಸಾಲದು. ನನ್ನದು 350 ಸಿನಿಮಾವಾಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಇಡೀ ಇಂಡಸ್ಟ್ರೀಯ ಎಲ್ಲಾ ನಟರ ಜೊತೆ ಮಾಡಿದ್ದೇನೆ. ಹೊಸಬರ ಜೊತೆಯೂ ಮಾಡಿದ್ದೇನೆ. ಹೊಸಬರು ಮತ್ತಷ್ಟು ಬರಲಿ ಎಂದರು.