ಜ್ಯೂ.ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambareesh) ಮತ್ತು ಅವಿವ ಮಗುವಿನ ಪಾಲನೆಯಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆ ಹೊಸದೊಂದು ಫೋಟೋಶೂಟ್ ಮಾಡಿಸಿದ್ದಾರೆ. ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಚೆಂದದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವಿವ ಹಂಚಿಕೊಂಡಿದ್ದಾರೆ.
ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಮತ್ತು ಅವಿವ (Aviva Bidapa) ದಂಪತಿ ಮಿಂಚಿದ್ದಾರೆ. ಇಬ್ಬರೂ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಅಂದಹಾಗೆ, ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾಗಲು ಅವಿವ ಜೋಡಿ ಮಸ್ತ್ ಆಗಿ ರೆಡಿಯಾಗಿದ್ದಾರೆ. ಇದನ್ನೂ ಓದಿ:ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ
ಅಂದಹಾಗೆ, ಕಳೆದ ವರ್ಷ ಈ ಜೋಡಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ನ.12ರಂದು ಗಂಡು ಮಗುವಿಗೆ ಅವಿವ ಜನ್ಮ ನೀಡಿದರು. ಇದನ್ನೂ ಓದಿ:ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್‌ನಿಂದ ಹೊರಬಂದ ತ್ರಿವಿಕ್ರಮ್!
View this post on Instagram
ಇನ್ನೂ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಬಳಿಕ ಅಭಿಷೇಕ್ ಅವರು ಮದಗಜ, ಅಯೋಗ್ಯ ಡೈರೆಕ್ಟರ್ ಮಹೇಶ್ ಕುಮಾರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾ ಯಾವಾಗ ಶುರು ಆಗಲಿದೆ ಎಂಬುದನ್ನು ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ.