ಕಿಚ್ಚ ಸುದೀಪ್ ಕುಟುಂಬ ಸಮೇತ ಅಭಿಷೇಕ್ ಅಂಬರೀಶ್ (Abhishek Ambarish)ಅವರ ಮದುವೆಗೆ ಆಗಮಿಸಿದ್ದರು. ಪತ್ನಿ ಪ್ರಿಯಾ, ಪುತ್ರಿ ಶಾನ್ವಿ ಜೊತೆ ಆಗಮಿಸಿದ್ದ ಅವರು ಅಂಬಿಮಾಮನ ಮಗನಿಗೆ ಬೆಲೆಬಾಳುವ ಉಡುಗೊರೆಯನ್ನು ನೀಡಿದ್ದಾರೆ. ಆ ಉಡುಗೊರೆಯನ್ನು ಸ್ವತಃ ಅಭಿಷೇಕ್ ಕೊರಳಿಗೆ ಹಾಕಿದ್ದಾರೆ. ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ ಸುದೀಪ್ (Kichcha Sudeep), ಹೊಸ ಜೀವನಕ್ಕೆ ಕಾಲಿಡುತ್ತಿರುವ ಅಭಿ ಮತ್ತು ಅವಿವಾಗೆ ಶುಭ ಹಾರೈಸಿದರು.
Advertisement
ಈ ಮದುವೆಗೆ (Marriage) ಅನೇಕ ಗಣ್ಯರು ಸಾಕ್ಷಿಯಾಗಿದ್ದು ನಟ ರಜನಿಕಾಂತ್, ತೆಲುಗು ನಟ ಚಿರಂಜೀವಿ, ನಟ ಯಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಆಗಮಿಸಿದ್ದರು.
Advertisement
Advertisement
ನಟ ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ (Aviva Bidappa) ಇಂದು ಹೊಸ ಜೀವನಕ್ಕೆ ಕಾಲಿಟ್ಟರು. ಗೌಡರ ಸಂಪ್ರದಾಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದರು. ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಅನೇಕ ಗಣ್ಯರು ಹಾಜರಿದ್ದರು. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಯಿತು.
Advertisement
ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿತ್ತು. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ. ಈಗಾಗಲೇ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳನ್ನು ಅಂಬಿ ಮನೆಯಲ್ಲೇ ನೆರವೇರಿಸಲಾಗಿದೆ.
ಇಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆದದ್ದು, ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.