ಮಂಡ್ಯ: ಅಭಿಷೇಕ್ ಅಂಬರೀಶ್ (Abhishek Ambareesh) ಮತ್ತು ಅವಿವಾ (Aviva) ಅವರ ವಿವಾಹವು ಜೂನ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಇಂದು (ಶುಕ್ರವಾರ) ಬೀಗರ ಔತಣಕೂಟ ನಡೆಯಲಿದೆ.
ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ಬೀಗರ ಔತಣ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 50 ಸಾವಿರ ಜನರ ಆಗಮನದ ನಿರೀಕ್ಷೆಯಲ್ಲಿರುವ ಸುಮಲತಾ ಅಂಬರೀಶ್ (Sumalatha Ambareesh) ಕುಟುಂಬ ಅಭಿಮಾನಿಗಳಿಗೆ ಬೊಂಬಾಟ್ ಬಾಡೂಟ ಹಾಕಿಸಲು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಇದನ್ನೂ ಓದಿ: ಬೀಗರೂಟಕ್ಕೆ ಬನ್ನಿ: ಮಂಡ್ಯದ ಜನತೆಗೆ ಆಹ್ವಾನ ನೀಡಿದ ಸುಮಲತಾ ಅಂಬರೀಶ್
Advertisement
Advertisement
ವಿಶಾಲವಾದ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4,500 ಮಂದಿ ಕುಳಿತು ಊಟ ಮಾಡಬಹುದಾಗಿದೆ. ಇಂದು ಬೆಳಗ್ಗೆ 11:30ರಿಂದ ಔತಣಕೂಟ ಆರಂಭವಾಗಲಿದ್ದು, ಕಳೆದ ರಾತ್ರಿಯಿಂದಲೇ ಬೀಗರ ಬಾಡೂಟ ಸಿದ್ಧಗೊಳ್ಳುತ್ತಿದೆ.
Advertisement
ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಗೊಳ್ಳುತ್ತಿದ್ದು, ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದ 900 ಮಂದಿಯಿಂದ ಅಡುಗೆ ತಯಾರಿ ಕಾರ್ಯಗಳು ಬಿರುಸಿನಿಂದ ನಡೆಯುತ್ತಿದೆ. 7 ಟನ್ ಮಟನ್, 8 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟವನ್ನು ಸಿದ್ಧಗೊಳಿಸಲಾಗುತ್ತಿದೆ. ಇದನ್ನೂ ಓದಿ: ಹೊಸ ಐಷಾರಾಮಿ ಕಾರು ಖರೀದಿಸಿದ ‘ಕೆಜಿಎಫ್’ ಸ್ಟಾರ್ ಯಶ್
Advertisement
ಊಟದ ಮೆನು ಏನು?
ರಾಗಿಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ನಾಟಿಕೋಳಿ ಸಾಂಬಾರ್, ಕಬಾಬ್, ಮೊಟ್ಟೆ, ರೈಸ್, ತಿಳಿ ಸಾಂಬಾರ್, ಬಾದುಶಾ, ಪಾಯಸ, ಬೀಡಾ, ಐಸ್‌ಕ್ರೀಂ, ಬಾಳೆಹಣ್ಣು ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್