CinemaDistrictsKarnatakaLatestMain PostSandalwood

ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾ ‘ಕಾಳಿ’ ಫಸ್ಟ್ ಲುಕ್ ನಾಳೆ ರಿಲೀಸ್

ದ್ಯ ಮರಿ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಮುಂಗಾರು ಮಳೆ ಖ್ಯಾತಿಯ ಕೃಷ್ಣ ಅವರು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ಲುಕ್ ನಾಳೆ ಬೆಳಗ್ಗೆ 11.22ಕ್ಕೆ ರಿಲೀಸ್ ಆಗಲಿದೆ. ಇದನ್ನೂ ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ

ನಾಳೆ ಮಂಡ್ಯದ ಗಂಡು ಅಂಬರೀಶ್ ಅವರ ಹುಟ್ಟು ಹಬ್ಬ. ಈ ಹುಟ್ಟು ಹಬ್ಬಕ್ಕಾಗಿ ಕೃಷ್ಣ ಅವರು ತಮ್ಮ ಹೊಸ ಸಿನಿಮಾದ ನಾಯಕನ ಫಸ್ಟ್ ಲುಕ್ ರೆಡಿ ಮಾಡಿಸಿದ್ದು, ಅಂಬರೀಶ್ ಅವರ ಪ್ರೀತಿಗಾಗಿ ಅದನ್ನು ರಿಲೀಸ್ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅಭಿಷೇಕ್ ವಿಶೇಷ ಪಾತ್ರವನ್ನು ನಿರ್ವಹಿಸಲಿದ್ದಾರಂತೆ. ಆ ಪಾತ್ರದ ಲುಕ್ ಹೇಗಿರಲಿದೆ ಎನ್ನುವುದು ನಾಳೆ ರಿವಿಲ್ ಆಗಲಿದೆ. ಇದನ್ನೂ ಓದಿ : ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ

ಕಾವೇರಿ ನದಿ ನೀರಿನ ಹೋರಾಟದ ಹಿನ್ನೆಲೆಯಾಗಿಟ್ಟುಕೊಂಡು ಈ ಕಥೆಯನ್ನು ಬರೆದಿದ್ದಾರಂತೆ ಕೃಷ್ಣ. ಈ ಹೋರಾಟದ ದಿನಗಳಲ್ಲಿ ನಡೆದ ನೈಜ ಘಟನೆಯನ್ನೇ ಸಿನಿಮಾ ಮಾಡುತ್ತಿದ್ದಾರೆ. ಇದೊಂದು ಲವ್ ಸ್ಟೋರಿ ಆಗಿದ್ದು, ಕಾವೇರಿ ಹೋರಾಟದ ಸಂದರ್ಭದಲ್ಲಿ ಈ ಪ್ರೇಮಿಗಳಿಗೆ ಆದ ತೊಂದರೆಯನ್ನು ಚಿತ್ರವಾಗಿ ಕಟ್ಟಿಕೊಡಲಿದ್ದಾರಂತೆ. ಇದನ್ನೂ ಓದಿ : ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್

ಸದ್ಯ ಸೂರಿ ನಿರ್ದೇಶನದ ಬ್ಯಾಡ್ ಮಾನರ್ಸ್ ಸಿನಿಮಾದ ಕೊನೆಯ ಹಂತದ ಶೂಟಿಂಗ್ ನಲ್ಲಿದ್ದಾರಂತೆ ಅಭಿಷೇಕ್. ಈ ಸಿನಿಮಾ ಮುಗಿಯುತ್ತಿದ್ದಂತೆಯೇ ಕಾಳಿ ಚಿತ್ರದ ಚಿತ್ರೀಕರಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರಂತೆ.

Leave a Reply

Your email address will not be published.

Back to top button