ಕನ್ನಡ ಸಿನಿಮಾ ರಂಗದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಹಾಗೂ ಮಾಡೆಲಿಂಗ್ ಕ್ಷೇತ್ರದ ಅವಿವಾ ಬಿಡಪ್ಪ (Aviva Bidappa) ಇಂದು ಬೆಳಗ್ಗೆ 9.30 ಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ (Marriage) ಬಂಧನಕ್ಕೆ ಒಳಗಾಗಲಿದೆ. ಈಗಾಗಲೇ ಅಭಿಷೇಕ್ ಮತ್ತು ಅವಿವಾ ಮದುವೆ ನಡೆಯುವ ಬೆಂಗಳೂರಿನ ಅರಮನೆ ಮೈದಾನದತ್ತ ಹೆಜ್ಜೆ ಹಾಕಿದ್ದಾರೆ.
ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ. ಈಗಾಗಲೇ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳನ್ನು ಅಂಬಿ ಮನೆಯಲ್ಲೇ ನೆರವೇರಿಸಲಾಗಿದೆ. ಇದನ್ನೂ ಓದಿ:ಆ ಸಂಬಂಧ ಅರ್ಧಕ್ಕೆ ನಿಂತು ಹೋಯಿತು, ಆದ್ರೆ ನನಗೆ ಮದುವೆ ಬಗ್ಗೆ ನಂಬಿಕೆಯಿದೆ- ನಟಿ ವೈಷ್ಣವಿ
ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದ್ದು, ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.
ಈಗಾಗಲೇ ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರದಲ್ಲಿ ಹೊಸ ಜೋಡಿ ಮಿಂಚಿರುವ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವಿವ ಡಿಸೈನ್ ಮಾಡಿರುವ ಧರಿಸಿನಲ್ಲಿ ಅಭಿ-ಅವಿವ ಹೇಗೆ ಕಾಣುತ್ತಾರೆ? ಮದುವೆ ಲುಕ್ ಹೇಗಿರಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ.