Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

Cricket

ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

Public TV
Last updated: July 7, 2024 6:17 pm
Public TV
Share
2 Min Read
ABHISHEK SHARMA 4
SHARE

– ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದ ಭಾರತ

ಹರಾರೆ: ಟೀಂ ಇಂಡಿಯಾದ ಯುವ ಬ್ಯಾಟರ್‌ ಅಭಿಷೇಕ್‌ ಶರ್ಮಾ (Abhishek Sharma) ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಜಿಂಬಾಬ್ವೆ ವಿರುದ್ಧ ಮೊದಲ ಪಂದ್ಯದಲ್ಲಿ ಗೋಲ್ಡನ್‌ ಡಕ್‌ ಆಗಿ ಭಾರೀ ಟೀಕೆಗೆ ಗುರಿಯಾಗಿದ್ದ ಅಭಿ, ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

ಇಲ್ಲಿನ ಹರಾರೆ ಸ್ಫೋರ್ಟ್‌ ಕ್ಲಬ್‌ ಮೈದಾನದಲ್ಲಿ ಜಿಂಬಾಬ್ವೆ (Zimbabwe) ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (Team India) 10 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರೂ ಬಳಿಕ ಅಭಿಷೇಕ್‌ ಶರ್ಮಾ ಅವರ ಸ್ಪೋಟಕ ಶತಕ ಹಾಗೂ ರುತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 234 ರನ್‌ ಸಿಡಿಸಿದೆ.

ABHISHEK SHARMA 3

ಚೊಚ್ಚಲ ಸರಣಿಯಲ್ಲೇ ಬೆಂಕಿ ಶತಕ:
ಐಪಿಎಲ್‌ ಬಳಿಕ ಚೊಚ್ಚಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಯನ್ನಾಡುತ್ತಿರುವ ಪಂಜಾಬ್‌ ಮೂಲದ ಅಭಿಷೇಕ್‌ ಶರ್ಮಾ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ 33 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಅಭಿ, ಮುಂದಿನ 13 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದ್ದಾರೆ. ಇದರಲ್ಲಿ 8 ಸಿಕ್ಸರ್‌, 7 ಬೌಂಡರಿಗಳೂ ಸೇರಿವೆ.

ಶತಕ ವೀರರ ಎಲೈಟ್‌ ಪಟ್ಟಿಗೆ ಅಭಿ:
ಚೊಚ್ಚಲ ಅಂತಾರಾಷ್ಟ್ರೀಯ ಸರಣಿಯಲ್ಲೇ ಸ್ಫೋಟಕ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ ದಿಗ್ಗರ ಎಲೈಟ್‌ ಪಟ್ಟಿ ಸೇರಿದ್ದಾರೆ. ಆರನ್‌ ಫಿಂಚ್‌, ಕ್ರಿಸ್‌ಗೇಲ್‌, ಕೊಲಿನ್‌ ಮನ್ರೋ, ರವೀಂದರ್‌ಪಾಲ್‌ ಸಿಂಗ್‌, ಜೋಶ್‌ ಇಂಗ್ಲಿಸ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಈವರೆಗೆ 47 ಎಸೆತಗಳಲ್ಲಿ ಶತಕ ಸಿಡಿಸಿದ ಆಟಗಾರರಾಗಿದ್ದರು. ಇದೀಗ ಈ ದಿಗ್ಗಜರ ಪಟ್ಟಿಗೆ ಅಭಿಷೇಕ್‌ ಶರ್ಮಾ ಸೇರ್ಪಡೆಗೊಂಡಿದ್ದಾರೆ.

ABHISHEK SHARMA

ಜಿಂಬಾಬ್ವೆಗೆ 235 ರನ್‌ ಗುರಿ:
ಜಿಂಬಾಬ್ವೆ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ನಷ್ಟಕ್ಕೆ 234 ರನ್‌ ಬಾರಿಸಿದ್ದು, ಎದುರಾಳಿ ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದೆ.

ಮಿಂಚಿದ ರಿಂಕು, ರುತು:
ಇತ್ತ ಅಭಿಷೇಕ್‌ ಶರ್ಮಾ ಶತಕ ಸಿಡಿಸಿ ಪೆವಿಲಿಯನ್‌ ಹಾದಿ ಹಿಡಿಯುತ್ತಿದ್ದಂತೆ ಜೊತೆಗೂಡಿದ ರುತುರಾಜ್‌ ಗಾಯಕ್ವಾಡ್‌, ರಿಂಕು ಸಿಂಗ್‌ ಜೋಡಿ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ 87 ರನ್‌ ಚಚ್ಚಿತು. ಇದರಿಂದ ಭಾರತ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ರುತುರಾಜ್‌ 47 ಎಸೆತಗಳಲ್ಲಿ 77 ರನ್‌ (1 ಸಿಕ್ಸರ್‌, 11 ಬೌಂಡರಿ) ಚಚ್ಚಿದರೆ, ರಿಂಕು ಸಿಂಗ್‌ ಸ್ಫೋಟಕ 48 ರನ್‌ (22 ಎಸೆತ, 5 ಸಿಕ್ಸರ್‌, 2 ಬೌಂಡರಿ) ಬಾರಿಸಿ ಅಜೇಯರಾಗುಳಿದರು. ನಾಯಕ ಶುಭಮನ್‌ ಗಿಲ್‌ 2 ರನ್‌ ಗಳಿಸಿದರು.

TAGGED:Abhishek SharmaBrian BennettRinku SinghRuturaj GaikwadShubman GillSikandar RazaTeam indiaZimbabweಅಭಿಷೇಕ್‌ ಶರ್ಮಾಜಿಂಬಾಂಬ್ವೆಟೀಂ ಇಂಡಿಯಾರುತುರಾಜ್‌ ಗಾಯಕ್ವಾಡ್‌ಶುಭಮನ್ ಗಿಲ್ಸಿಖಂದರ್‌ ರಝಾ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
40 minutes ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
1 hour ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
1 hour ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
2 hours ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
2 hours ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?