ನವದೆಹಲಿ: ಜಮ್ಮು ಕಾಶ್ಮೀರಕ್ಕೆ (Jammu Kashnir) ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ಕಾಶ್ಮೀರ ಈಗ ಸುರಕ್ಷಿತವಾಗಿದೆ. ಭಯೋತ್ಪಾದಕ ಚಟುವಟಿಕೆಗಳು (Terrorist Activity) 10 ಪಟ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Advertisement
ಆರ್ಟಿಕಲ್ 370ರ (Article 370) ರದ್ದತಿಯ ನಂತರ, ಜಮ್ಮು ಮತ್ತು ಕಾಶ್ಮೀರವು ಸುಧಾರಣೆಗಳ ನೇತೃತ್ವದ ಪರಿವರ್ತಕ ಬದಲಾವಣೆಯ ಗಮನಾರ್ಹ ಯುಗಕ್ಕೆ ಸಾಕ್ಷಿಯಾಗಿದೆ ಮತ್ತು ಜನರ ಸಾಮೂಹಿಕ ಪ್ರಯತ್ನಗಳಿಂದ ನಡೆಸಲ್ಪಟ್ಟಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ 2014ರ ಮೊದಲು ಜಮ್ಮು ಕಾಶ್ಮೀರ ಹೇಗಿತ್ತು ಮತ್ತು ಈಗ ಹೇಗಿದೆ ಎಂಬ ಸಂಪೂರ್ಣ ಚಿತ್ರಣವನ್ನು ನೀಡಿದೆ. ಇದನ್ನೂ ಓದಿ: Article 370 Verdict: J&K, ಲಡಾಖ್ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಅಮಿತ್ ಶಾ ಸಂತಸ
Advertisement
Advertisement
ಭಯೋತ್ಪಾದಕ ಘಟನೆಗಳು:
1994-2014ರ ನಡುವೆ ಒಟ್ಟು 47,381 ಭಯೋತ್ಪಾದಕ ಘಟನೆಗಳು ನಡೆದಿದ್ದು, ಪ್ರತಿ ವರ್ಷ ಸರಾಸರಿ 2,360 ಭಯೋತ್ಪಾದಕ ಘಟನೆಗಳು ನಡೆದಿದೆ. 2014ರಿಂದ ಒಟ್ಟು 2.197 ಕೃತ್ಯಗಳು ನಡೆದಿದ್ದು, ಪ್ರತಿ ವರ್ಷ ಸರಾಸರಿ 240 ಭಯೋತ್ಪಾದಕ ಘಟನೆಗಳು ನಡೆಯುತ್ತಿವೆ. ಇನ್ನು ನಾಗರಿಕ ಸಾವುನೋವುಗಳಲ್ಲಿ 72% ಕಡಿತವಾಗಿದ್ದು, ಭದ್ರತಾ ಸಿಬ್ಬಂದಿಯ ಸಾವುನೋವುಗಳಲ್ಲಿ 59% ಕಡಿತವಾಗಿದೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ
Advertisement
ಗ್ರಾಮಗಳನ್ನು ಸಂಪರ್ಕಿಸಿ ಸಮೃದ್ಧಿಯನ್ನು ಖಾತರಿಪಡಿಸುವಲ್ಲಿ 2014ರ ಮೊದಲು ಪ್ರತಿವರ್ಷ 158 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿತ್ತು. ಆದರೆ ಈಗ ಅಂದರೆ 2014ರ ಬಳಿಕ ಪ್ರತಿ ವರ್ಷಕ್ಕೆ 8,068 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಸ್ವಾತಂತ್ರದ ನಂತರ ಒಟ್ಟು 24,000 ಮನೆಗಳ ನಿರ್ಮಾಣ ಮಾಡಿದ್ದು, ಪ್ರಸ್ತುತ 5 ವರ್ಷಗಳಲ್ಲಿ 1.45 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?
ಹರ್ ಘರ್ ನಲ್ ಸೆ ಜಲ್‌ನ ಯೋಜನೆಯಡಿ 2014ರ ಮೊದಲು 7.82 ಲಕ್ಷ ಮನೆಗಳಿಗೆ ಟ್ಯಾಪ್ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 2014ರ ನಂತರ ಒಟ್ಟು 13 ಲಕ್ಷ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಪಿಂಚಣಿ ಫಲಾನುಭವಿಗಳಲ್ಲಿ ಒಟ್ಟು 66% ಹೆಚ್ಚಳವಾಗಿದ್ದು 2014ರ ಮೊದಲು 6 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿತ್ತು. ಈಗ 10 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿದೆ. ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು
21ನೇ ಶತಮಾನದ ಈ ದಶಕವು ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಶಕವಾಗಿದೆ. ಈಗ ಹಳೆಯ ಸವಾಲುಗಳನ್ನು ಬಿಟ್ಟು ಹೊಸ ಸಾಧ್ಯತೆಗಳ ಸಂಪೂರ್ಣ ಲಾಭ ಪಡೆಯುವ ಸಮಯ. ಜಮ್ಮು ಮತ್ತು ಕಾಶ್ಮೀರದ ಯುವಕರು ತಮ್ಮ ಪ್ರದೇಶದ ಅಭಿವೃದ್ಧಿಗಾಗಿ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರುತ್ತಿದ್ದಾರೆ ಎಂದು ನನಗೆ ಸಂತೋಷವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಸಾಹಸಗಾಥೆಯನ್ನು ಬರೆಯುವವರು ನಮ್ಮ ಯುವಕರು ಎಂದು 2022ರ ಅಕ್ಟೋಬರ್ 30ರಂದು ಜಮ್ಮು ಕಾಶ್ಮೀರ ರೋಜ್‌ಗಾರ್ ಮೇಳದಲ್ಲಿ ಪ್ರಧಾನಿ ಮೋದಿ (Narendra Modi) ಸಂದೇಶ ನೀಡಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ