– ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಟಿಜೆ ಅಬ್ರಹಾಂ
ನವದೆಹಲಿ: ಸಿಎಂ ಸಿದ್ಧರಾಮಯ್ಯ (CM Siddaramaiah) ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ (Election Commission of India) ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ದೂರು ನೀಡಿದ್ದಾರೆ.
Advertisement
2013 ರ ವಿಧಾನಸಭಾ ಚುನಾವಣೆಯ (Vidhan Sabha Election) ಅಫಿಡವಿಟ್‌ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ. ಪತ್ನಿ ಪಾರ್ವತಿ (Wife Parvathi) ಹೆಸರಿನಲ್ಲಿದ್ದ 3 ಎಕ್ರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ.
Advertisement
Advertisement
ದೂರಿನಲ್ಲಿ ಏನಿದೆ?
ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ 2010 ರಲ್ಲಿ ಈ ಜಾಗವನ್ನು ಗಿಫ್ಟ್ ಡೀಡ್ ಆಗಿ ನೋಂದಣಿ ಮಾಡಿದ್ದಾರೆ. ಈ ಜಾಗದ ಮೂಲ ಮಾಲೀಕರು ದೇವರಾಜು ಮತ್ತು ಕುಟುಂಬಸ್ಥರು ಆಗಿದ್ದು ಆಗಸ್ಟ್ 25, 2004 ರಂದು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಈ ಜಾಗವನ್ನು ಮಾರಾಟ ಮಾಡಿದ್ದಾರೆ. ಈ ಅವಧಿಯಲ್ಲಿ ಸಿದ್ದರಾಮಯ್ಯನವರು ಜೆಡಿಎಸ್ ಪಕ್ಷದಲ್ಲಿದ್ದು ಕರ್ನಾಟಕ ಉಪ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಇದನ್ನೂ ಓದಿ: MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್ ಪ್ರತಿಭಟನೆಗೆ ಕರೆ!
Advertisement
ಸಹೋದರ ಪಾರ್ವತಿ ಅವರಿಗೆ ಗಿಫ್ಟ್ ಡೀಡ್ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಶಾಸಕರು ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿದ್ದರು. ಅಚ್ಚರಿಯ ವಿಷಯ ಏನೆಂದರೆ ಮಾರ್ಚ್ 31, 2013ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದ ವಾರ್ಷಿಕ ರಿಟರ್ನ್ ಲೋಕಾಯುಕ್ತಕ್ಕೆ ಸಲ್ಲಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಪತ್ನಿ ಬಳಿ ಇದ್ದ ನಿವೇಶನದ ವಿವರವನ್ನು ಉಲ್ಲೇಖಿಸಿದ್ದಾರೆ. ಆದರೆ 2013ರ ಚುನಾವಣೆಯ ಅಫಿಡವಿಟ್ ಸಲ್ಲಿಸುವಾಗ ಈ ವಿಚಾರವನ್ನು ಉದ್ದೇಶಪೂರ್ವಕವಾಗಿ ಉಲ್ಲೇಖ ಮಾಡಿಲ್ಲ.
ಕೃಷಿ ಭೂಮಿಯ ಬಗ್ಗೆಯ ಮಾಹಿತಿ ನೀಡದೇ ಸುಳ್ಳು ಅಫಿಡವಿಟ್ ಸಲ್ಲಿಸಿದ್ದು ಜನಪ್ರತಿ ನಿಧಿ ಕಾಯ್ದೆ ಸೆಕ್ಷನ್ 125 ಎ ಮತ್ತು ಸೆಕ್ಷನ್ 8 ಉಲ್ಲಂಘನೆ. ಸುಳ್ಳು ದಾಖಲೆ ಸಲ್ಲಿಸಿದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ 227, 229, 231, 236, 202 ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಟಿಜೆ ಅಬ್ರಹಾಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: Valmiki Scam | ಮಾಲ್, ಪಾರ್ಕ್, ಜಂಕ್ಷನ್‌ನಲ್ಲಿ ಕೋಟಿ ಕೋಟಿ ಸಂದಾಯ