ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು (Jammu and Kashmir Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ಸರಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ.
2019ರ ಆಗಸ್ಟ್ 6 ರಂದು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.
Advertisement
ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು
Advertisement
Advertisement
ತೀರ್ಪುನಲ್ಲಿರುವ ಪ್ರಮುಖ ಅಂಶಗಳು
ಆರ್ಟಿಕಲ್ 356 (ರಾಷ್ಟ್ರಪತಿ ಆಳ್ವಿಕೆ ಹೇರಿಕೆ) ಅಡಿಯಲ್ಲಿ ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಆರ್ಟಿಕಲ್ 356ರ ಅಡಿಯಲ್ಲಿ ಘೋಷಣೆ ಜಾರಿ ಮಾಡುವ ಮೊದಲು ಕೇಂದ್ರವು ಲೆಕ್ಕವಿಲ್ಲದಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಒಂದು ವೇಳೆ ಅ ನಿರ್ಧಾರವನ್ನು ಪ್ರಶ್ನಿಸಿ ಅನುಮತಿ ನೀಡಿದರೆ ಅದು ಅವ್ಯವಸ್ಥೆಗೆ ಕಾರಣವಾಗುತ್ತದೆ.
Advertisement
ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತಲೂ ಭಾರತದ ಸಂವಿಧಾನ ಮೇಲಿದೆ. 370ನೇ ವಿಧಿಯ ಅಡಿ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಇದು ಶಾಶ್ವತವಲ್ಲ. ಅಂದಿನ ಪರಿಸ್ಥಿತಿಯನ್ನು ಪರಿಗಣಿಸಿ ಈ ವಿಶೇಷ ಸ್ಥಾನ ನೀಡಲಾಗಿದೆ.
ಜಮ್ಮು ಕಾಶ್ಮೀರಕ್ಕೆ ಭಾರತದ ಸಂವಿಧಾನದ ಅಡಿಯಲ್ಲೇ ವಿಶೇಷ ಸ್ಥಾನ ಮಾನ ನೀಡಿದ್ದರಿಂದ ಇದು ಭಾರತದ ಅವಿಭಾಜ್ಯ ಅಂಗ.
356 ನೇ ವಿಧಿಯಡಿ ಘೋಷಣೆಯ ಸಮಯದಲ್ಲಿ ಕೇಂದ್ರವು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದ ಒಪ್ಪಲು ಸಾಧ್ಯವಿಲ್ಲ. ರಾಷ್ಟ್ರಪತಿ ಆಳ್ವಿಕೆಯ ಸಮಯದದಲ್ಲಿ ಕೇಂದ್ರವು ರಾಜ್ಯದ ಶಾಸಕಾಂಗದ ಅಧಿಕಾರವನ್ನು ಚಲಾಯಿಸಬಹುದು.
ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯು ಅಸ್ತಿತ್ವದಲ್ಲಿಲ್ಲದಿರುವಾಗ, 370 ನೇ ವಿಧಿಯ ವಿಶೇಷ ಷರತ್ತು ಅಸ್ತಿತ್ವದಲ್ಲಿರುವುದಿಲ್ಲ. ಸಂವಿಧಾನ ರಚನಾ ಸಭೆಯು ಜಮ್ಮು ಮತ್ತು ಕಾಶ್ಮೀರವನ್ನು ಎಂದಿಗೂ ಶಾಶ್ವತ ಸಂಸ್ಥೆಯಾಗಲು ಉದ್ದೇಶಿಸಿರಲಿಲ್ಲ.
ಜಮ್ಮು ಕಾಶ್ಮೀರ ಭಾರತದೊಂದಿಗೆ ವಿಲೀನಗೊಂಡಾಗ ತನ್ನ ಸಂಪೂರ್ಣ ಸಾರ್ವಭೌಮತ್ವವನ್ನು ಒಪ್ಪಿತ್ತು. ಭಾರತಕ್ಕೆ ಸೇರಿದ ನಂತರ ಅದರ ಪ್ರತ್ಯೇಕ ಸಾರ್ವಭೌಮತ್ವ ಉಳಿಯುವುದಿಲ್ಲ.
ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಲಾದ ನಿರ್ಧಾರ ಸರಿಯಾಗಿದೆ. ಕೇಂದ್ರ ಚುನಾವಣಾ ಆಯೋಗ 2024ರ ಸೆಪ್ಟೆಂಬರ್ 30ರ ಒಳಗಡೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸಬೇಕು.