ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಸದ್ದು ಮಾಡಿದ್ದ ಬುಲ್ಡೋಜರ್ ಈಗ ಮತ್ತೆ ಸದ್ದು ಮಾಡಿದೆ. ಇತ್ತೀಚೆಗಷ್ಟೇ ಪ್ರತಾಪಗಢ ಜಿಲ್ಲೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ, ಇದೀಗ ಬುಲ್ಡೋಜರ್ ಭಯದಿಂದ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ.
ಮಾರ್ಚ್ 19 ರಂದು ಪ್ರತಾಪ್‍ಗಢ್ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಮಹಿಳೆ ಪತಿಯೊಂದಿಗೆ ಕಾಯುತ್ತಿದ್ದರು. ಈ ವೇಳೆ ಪತಿ ಮಹಿಳೆಯನ್ನು ಒಂಟಿಯಾಗಿ ಬಿಟ್ಟು ಚಹಾ ಖರೀದಿಸಲು ಹೋಗಿದ್ದರು. ಈ ವೇಳೆ ಆರೋಪಿ ಮಹಿಳೆಯ ಬಳಿಗೆ ಬಂದು ಕೀಲಿಯನ್ನು ನೀಡಿ, ಪಾರ್ಕಿಂಗ್ ಬಳಿ ಇರುವ ಸ್ವಚ್ಛ ಶೌಚಾಲಯಕ್ಕೆ ಹೋಗಿ ಬಳಸಬಹುದೆಂದು ತಿಳಿಸಿ ಆಕೆಗೆ ಕೀಲಿಯನ್ನು ನೀಡಿದ್ದಾನೆ. ನಂತರ ಹೊರಗೆ ನಿಂತು ಕಾಯುತ್ತಿದ್ದ ಆರೋಪಿ, ಮಹಿಳೆ ಶೌಚಾಲಯಕ್ಕೆ ಪ್ರವೇಶಿಸಿದ ಕೂಡಲೇ ಆಕೆಯ ಮೇಲೆ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದನು.
Advertisement
Advertisement
ಈ ಸಂಬಂಧ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ವೈದ್ಯಕೀಯ ಪರೀಕ್ಷೆ ವೇಳೆ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿತ್ತು. ಹೀಗಾಗಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಲು ಆರಂಭಿಸಿದರು. ಆದರೆ ಆತ ಪರಾರಿಯಾಗಿದ್ದ. ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ
Advertisement
ಹುಡುಕಾಟ ನಡೆಸಿದರೂ ಪತ್ತೆಯಾದ ಹಿನ್ನೆಲೆಯಲ್ಲಿ ಕೊನೆಗೆ ಆತನ ಮನೆಯ ಹೊರಗಡೆ ಬುಲ್ಡೋಜರ್ ತಂದು ನಿಲ್ಲಿಸಿ 24 ಗಂಟೆಯೊಳಗೆ ಶರಣಾಗದಿದ್ದರೆ, ಮನೆಯನ್ನೇ ನೆಲಸಮ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ವಿಚಾರಕ್ಕೆ ಭಯಗೊಂಡ ಆರೋಪಿ ನೇರವಾಗಿ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Advertisement
ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ಬುಲ್ಡೋಜರ್ ಬಾಬಾ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ಮಾತುಬಾರದ ಬಾಲಕನ ಕೊಂದು ಗೋಣಿ ಚೀಲದಲ್ಲಿ ತುಂಬಿ ಎಸೆದ್ರು
ಯೋಗಿ ಆದಿತ್ಯನಾಥ್ ಬುಲ್ಡೋಜರ್ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‍ಪ್ರೆಸ್ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು.