ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕೊನೆಯ ಹಂತದ ಚುನಾವಣೆ ಪ್ರಚಾರಕ್ಕೆ ಮೇ 17 ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಮೇ 18ರ ದಿನವಿಡಿ ಮೋದಿ ಅವರ ಕೇದಾರನಾಥ ಯಾತ್ರೆಯನ್ನು ವಾಹಿನಿಗಳು ಪ್ರಸಾರ ಮಾಡಿವೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.
Advertisement
Advertisement
ಪ್ರಧಾನಿ ಮೋದಿ ಅವರು ಕೇದಾರನಾಥ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ಮಾಸ್ಟರ್ ಪ್ಲಾನ್ ಘೋಷಣೆ ಮಾಡಿದ್ದಾರೆ. ಈ ವೇಳೇ ಸಾರ್ವಜನಿಕರು ಮತ್ತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿದೆ. ಇದನ್ನು ಓದಿ: ಪ್ರಧಾನಿ ಮೋದಿ ಧ್ಯಾನದ ಗುಹೆಯ ವಿಶೇಷತೆ ಏನು?
Advertisement
ಪ್ರಧಾನಿ ಮೋದಿ ಅವರ ಪ್ರತಿಯೊಂದು ಕ್ರಿಯೆಗೆ ವ್ಯಾಪಕ ಪ್ರಚಾರ ನೀಡಲಾಗಿದೆ. ಇದು ಮತದಾರರ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಸಾಧ್ಯತೆಯಿದೆ. ಹಿಂದುಗಡೆ “ಮೋದಿ ಮೋದಿ” ಘೋಷಣೆ ಸಹ ಪ್ರಸಾರವಾಗಿತ್ತು. ಇಷ್ಟೆಲ್ಲ ನಡೆಯುತ್ತಿದ್ದರೂ ಚುನಾವಣಾ ಆಯೋಗ ಕಣ್ಣಿದ್ದರೂ ಕುರುಡಾದಂತೆ ವರ್ತಿಸಿದೆ ಎಂದು ಟಿಎಂಸಿ ತನ್ನ ದೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.
Advertisement
ಪ್ರಧಾನಿಯಾದ ಮೇಲೆ ನಾಲ್ಕನೇ ಬಾರಿ ಕೇದಾರನಾಥಕ್ಕೆ ಭೇಟಿ ನೀಡಿರುವ ಮೋದಿ, ದೇಗುಲದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ರುದ್ರಗುಹೆಯಲ್ಲಿ ಧ್ಯಾನ ಮಾಡಿದ್ದಾರೆ. ಮಳೆ ನಡುವೆಯೂ ಗುಹೆಗೆ ಕಾಲ್ನಡಿಗೆ ಮೂಲಕ ತೆರಳಿದ ಪ್ರಧಾನಿ ಮೋದಿ ಧ್ಯಾನಕ್ಕೆ ಕುಳಿತರು. ಇಲ್ಲಿ ಸುಮಾರು 17 ಗಂಟೆಗಳ ಕಾಲ ಮೋದಿ ಧ್ಯಾನ ಮಾಡಿದ್ದರು. ಇದನ್ನು ಓದಿ:ಪ್ರತಿಷ್ಠೆಯ ಯುದ್ಧ ಗೆಲ್ಲೋಕೆ ಮೋದಿ ದೇವರ ಮೊರೆ – ರಾತ್ರಿಯಿಡೀ ಕೇದಾರನಾಥ ಗುಹೆಯಲ್ಲಿ ನಮೋ ಧ್ಯಾನ
ಧ್ಯಾನಕ್ಕೆ ಕುಳಿತುಕೊಳ್ಳುವ ಮುನ್ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಮೋದಿ ರುದ್ರಾಭಿಷೇಕ ಮಾಡಿದ್ದಾರೆ. ಬಳಿಕ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆ ಕೊಟ್ಟಿದ್ದಾರೆ.
ಈ ಹಿಂದೆ 2017ರ ಮೇ 3, ಅಕ್ಟೋಬರ್ 20 ಮತ್ತು 2018ರ ನವೆಂಬರ್ 7ರಂದು ಪ್ರಧಾನಿ ಮೋದಿ ಕೇದಾರನಾಥನ ಸನ್ನಿಧಿಗೆ ಭೇಟಿ ನೀಡಿದ್ದರು.