ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶಹೊರಹಾಕಿದ್ದಾರೆ.
Advertisement
ಬೆಳಗಾವಿ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನಿಲಜಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ
Advertisement
Advertisement
ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದರೆ ಇದ್ಯಾವುದನ್ನು ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೇ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ