ಗಾಂಧಿನಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಕಾಲೇಜು ಪ್ರಾಂಶುಪಾಲರೊಬ್ಬರಿಗೆ (Principal) ಜೈಶ್ರೀರಾಮ್ (Jai Shri Ram) ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿರುವ ಘಟನೆ ಅಹಮದಾಬಾದ್‍ನ ಎಚ್‍ಎ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
Advertisement
ಗುಜರಾತ್ ಲಾ ಸೊಸೈಟಿ (BLS) ವಿಶ್ವವಿದ್ಯಾಲಯದ ಎಚ್‍ಎ ಕಾಲೇಜಿನಲ್ಲಿ (Collage) ಕೆಲವು ದಿನಗಳ ಹಿಂದೆ ತರಗತಿ ನಡೆಯುತ್ತಿರುವಾಗ ಕೆಲ ವಿದ್ಯಾರ್ಥಿಗಳು (Students) ಜೈಶ್ರೀರಾಮ್ ಎಂದು ಘೋಷಣೆ ಕೋಗಿದ್ದರು. ಹೀಗಾಗಿ ತರಗತಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ಸಂಜಯ್ ವಕೀಲರ ಬಳಿ ಕರೆದುಕೊಂಡು ಹೋಗಿ ವಿಚಾರಿಸಿದ್ದರು. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ಪಡೆದ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕ್ಷಮೆಯಾಚಿಸಿದ್ದರು. ಇದನ್ನೂ ಓದಿ: KGF ಚಿನ್ನದ ಗಣಿಯಲ್ಲಿ ಮತ್ತೆ ಹೊಳೆಯುವ ಚಿನ್ನ – ಟೆಂಡರ್ ಕರೆದ ಕೇಂದ್ರ
Advertisement
Advertisement
ಈ ಘಟನೆಯ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರಾಂಶುಪಾಲರಿಗೆ ಎದುರಿಸಿ ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು. ಅಲ್ಲದೆ ತರಗತಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳ ಬಳಿ ಕ್ಷಮಾಪಣಾ ಪತ್ರ ಬರೆಸಿದ್ದಾರೆ. ಈ ಘಟನೆಯ ಕುರಿತಾಗಿ ಪ್ರಾಂಶುಪಾಲರು ಕ್ಷಮೆ ಕೇಳಿ ನಾನು ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಇರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ