ಬಳ್ಳಾರಿ: ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ (Jewelery shop) ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡ (AC Blast) ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿ (Bellary)- ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಅಲ್ಲದೇ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ. ಇದನ್ನೂ ಓದಿ: ಪ್ರಜ್ವಲ್ ಕೇಸ್ – ಜಡ್ಜ್ ಮುಂದೆ ಸಂತ್ರಸ್ತೆಯಿಂದ ಹೇಳಿಕೆ: ಏನಿದು ಸಿಆರ್ಸಿಪಿ ಸೆಕ್ಷನ್ 164? ಹೇಳಿಕೆಗೆ ಯಾಕಿಷ್ಟು ಮಹತ್ವ?
ಗಾಯಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ ಹೊಲದ ಕೆಲಸಕ್ಕೆ ಹೋಗಿದ್ದ ರೈತ ಬಲಿ