ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಎಸಿಯ ವಿಷಾನಿಲ ಸೋರಿಕೆಯಾಗಿದ್ದು, ನಾಲ್ಕು ಜನ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರದ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಎಂಬುವವರ ಮನೆಯಲ್ಲಿ ತಡರಾತ್ರಿ ಸಂಭವಿಸಿದೆ.
ರಾಘವೇಂದ್ರ ಶೆಟ್ಟಿ ಎಂಬವರ ಮನೆಯಲ್ಲಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಸಿಯ ವಿಷಾನಿಲ ಸೋರಿಕೆಯಾಗಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಈ ಅವಘಡದಲ್ಲಿ ವೆಂಕಟ್ ಪ್ರಶಾಂತ್ (42), ಪತ್ನಿ ಡಿ.ಚಂದ್ರಕಲಾ (38), ಮಕ್ಕಳಾದ ಎಚ್.ಎ.ಅದ್ವಿಕ್(16), ಪ್ರೇರಣಾ,(8) ಹೊರಬರಲಾಗದೇ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ
Advertisement
Advertisement
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಸಿಯಲ್ಲಿ ಸೋರಿಕೆಯೊಗಿ ಸ್ಫೋಟ ಸಂಭವಿಸಿದೆ. ತಡರಾತ್ರಿ ಹೊತ್ತು ನಿದ್ದೆ ಮಾಡುತ್ತಿದ್ದ ವೇಳೆ ಎಸಿ ಸ್ಫೋಟಗೊಂಡು ಬೆಂಕಿ ಧಗಧಗನೆ ಹೊತ್ತಿ ಉರಿದು ಇಡೀ ಮನೆ ಆವರಿಸಿದ್ದರಿಂದ ದಂಪತಿ ಮತ್ತು ಮಕ್ಕಳು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ.
Advertisement
ಇಷ್ಟಾದರು ಅಗ್ನಿಯ ರೌದ್ರಾವತಾರ ಮತ್ತೆ ಮುಂದುವರಿದಿದ್ದು, ಎಸಿಯ ವೈರ್ ಮತ್ತು ಮನೆಯ ವೈರಿಂಗ್ ಮೂಲಕ ಮತ್ತೊಮ್ಮೆ ಬೆಂಕಿಯ ಕಿಡಿ ಹೊತ್ತಿಕೊಂಡಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಇದನ್ನೂ ಓದಿ: ಮದ್ಯದ ಬಾಟಲಿಯಿಂದ ಸಿಕ್ಕಿ ಬಿದ್ರು 2 ಕೋಟಿ ಕದ್ದ ಖದೀಮರು
Advertisement
ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಕುಟುಂಬದಲ್ಲಿ ಸ್ವಲ್ಪ ವೈಮನಸ್ಸು, ವಿವಾದಗಳಿದ್ದು ತೆಗೆದುಕೊಂಡ ಸಾಲ ಮರುಪಾವತಿ ಮಾಡಿರಲಿಲ್ಲ, ಆ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೀವ ಉಳಿಸುತ್ತಿತ್ತು ಫೋನ್ ಕಾಲ್: ಘಟನೆ ಸಂಬಂಧ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರಾಘವೇಂದ್ರ ಶೆಟ್ಟಿ, ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ನಾವು ಕೆಳ ಮನೆಯಲ್ಲಿ ಮಲಗಿದ್ದು, ಮಗ, ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳು ಮಹಡಿಯಲ್ಲಿ ಮಲಗಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಾಗ, ನಾನು ಫೋನ್‌ಕಾಲ್ ಮಾಡಿ ಮಗನನ್ನು ಎಬ್ಬಿಸಲು ಪ್ರಯತ್ನಿಸಿದೆ. ಆದರೆ ಮಗ ಫೋನ್ ತೆಗೆಯಲೇ ಇಲ್ಲ. ನಾವು ಹೊರಬಂದು ಬಿಟ್ಟೆವು. ಮಹಡಿ ಮೇಲಿನ ರೂಂ ಒಳಗಡೆಯಿಂದ ಲಾಕ್ ಆಗಿದ್ದರಿಂದ ಅವರು ಗಾಬರಿಯಿಂದ ಹೊರ ಬರಲು ಆಗಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದ್ದು, ಈಗ ಮನೆಯಲ್ಲಿ ನೀರವ ಮೌನ ತುಂಬಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ನಡುಬೀದಿಯಲ್ಲೇ 25 ವರ್ಷದ ಮಗನಿಗೆ ಬೆಂಕಿ ಹಚ್ಚಿದ ತಂದೆ: ಸಾವು-ಬದುಕಿನ ನಡ್ವೆ ಹೋರಾಡ್ತಿದ್ದಾಗ ಅರ್ಪಿತ್ ಹೇಳಿದ್ದೇನು..?
ರಾಘವೇಂದ್ರ ಅವರಿಗೆ ಮತ್ತೆ ಶಾಕ್: ಘಟನೆಯಲ್ಲಿ ಈಗಾಗಲೇ ಮಗ ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡಿರುವ ರಾಘವೇಂದ್ರ ಶೆಟ್ಟಿ ಅವರಿಗೆ ಘಟನೆ ಮಾಸುವ ಮುನ್ನವೇ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯನ್ನು ಗಮನಿಸಿ ಸ್ಥಳೀಯರೇ ಬೆಂಕಿ ನಂದಿಸಿದ್ದಾರೆ.