ಚಿಕ್ಕಬಳ್ಳಾಪುರ: ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆಯೇ ಹೊರತು ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಎಸಿಬಿ ರದ್ದು ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಸಿಬಿ ರದ್ದು – ಹೈ ಆದೇಶಕ್ಕೆ ತಡೆ ಕೋರಿ ಸುಪ್ರೀಂನಲ್ಲಿ ಅರ್ಜಿ
ಎಸಿಬಿ ವಿಚಾರವಾಗಿ ಹೈಕೋರ್ಟ್ ಆದೇಶ ಪಾಲನೆ ಪ್ರಕ್ರಿಯೆ ಆರಂಭ ಆಗಿದೆ. ಸರ್ಕಾರದಿಂದ ಸುಪ್ರೀಂ ಮೊರೆ ಹೋಗಿಲ್ಲ. ಖಾಸಗಿ ವ್ಯಕ್ತಿ ಮೇಲ್ಮನವಿ ಹೋಗಿರೋದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗದಿರಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದೇವೆ. ಅದಕ್ಕೆ ನಾವು ಬದ್ಧ ಎಂದಿದ್ದಾರೆ. ಇದನ್ನೂ ಓದಿ: ಆಗಸ್ಟ್ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಭ್ರಷ್ಟಾಚಾರ ನಿಗ್ರಹ ದಳವನ್ನು(ಎಸಿಬಿ) ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಖಾಸಗಿ ಅರ್ಜಿ ಸಲ್ಲಿಸಲಾಗಿದೆ. ಇದರ ಬೆನ್ನಲ್ಲೇ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.