ಹುಬ್ಬಳ್ಳಿ: ರೈತರೊಬ್ಬರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇನ್ಸ್ಪೆಕ್ಟರ್ ಹೊಟೇಲ್ ನಲ್ಲಿ ಹಣ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಕುಂದಗೋಳ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂದಾಯ ನಿರೀಕ್ಷಕ ಸದಾನಂದ ಭೀಮಣ್ಣ ಎನ್ನುವವರು ಶರೇವಾಡ ಗ್ರಾಮದ ರೈತ ಲೋಚನಪ್ಪ ಎಂಬವರ ಜಮೀನಿನ ವಿಷಯ ಬಗೆಹರಿಸುವ ಸಲುವಾಗಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ – ಕಬ್ಬು ನಾಟಿ ಮಾಡಿದ ಕೌರವ
Advertisement
Advertisement
ಲಂಚಕ್ಕೆ ಬೇಡಿಕೆ ಇಟ್ಟ ಪರಿಣಾಮ ಎಸಿಬಿಗೆ ರೈತರು ದೂರು ನೀಡಿದ್ದರು. ಈ ಪರಿಣಾಮ ರೈತನ ದೂರು ಆಧರಿಸಿ ಎಸಿಬಿ ಅಧಿಕಾರಿಗಳು, ಇಂದು ಹುಬ್ಬಳ್ಳಿಯ ಕಾಮತ್ ಹೊಟೇಲ್ ನಲ್ಲಿ ರೈತ ಲೋಚನಪ್ಪ ಅವರಿಂದ 35,000 ರೂ. ಪಡೆಯುವಾಗ ಎಸಿಬಿ ವಿಭಾಗದ ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ಮಾಡಿ ಸದಾನಂದ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೆರೆಯ ಬಳಿ ಮದ್ಯಪಾನ ಮಾಡಿ ಗುಂಡಿನ ದಾಳಿ – FSL ತಂಡದಿಂದ ಪರಿಶೀಲನೆ
Advertisement
Advertisement
ಡಿವೈಎಸ್‍ಪಿ ವೇಣುಗೋಪಾಲ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಅಧಿಕಾರಿಗಳಾದ ಅಲಿಶೇಖ್, ವಿ.ಎನ್.ಖಡಿ ಇವರೊಂದಿಗೆ ಸಿಬ್ಬಂದಿಗಳಾದ ಲೊಕೇಶ್ ಬೆಂಡಿಕಾಯಿ, ಗಿರೀಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಈ ವೇಳೆ ಕಂದಾಯ ನಿರೀಕ್ಷಕರನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಲಾಗಿದೆ.