ಬೆಂಗಳೂರು; ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವು ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
18 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮೂರು ಕಡೆ ಸೇರಿ ರಾಜ್ಯಾದ್ಯಂತ ಒಟ್ಟು 78 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ಇನ್ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಹಿರಿಯ ವಕೀಲರು ಕಾಂಗ್ರೆಸ್ ಸಂಸ್ಕೃತಿಯ ವ್ಯಕ್ತಿಯಲ್ಲ: ಕಪಿಲ್ ಸಿಬಲ್ ವಿರುದ್ಧ ಗೆಹ್ಲೋಟ್ ಕಿಡಿ
ಮಹಾಲಕ್ಷ್ಮಿ ಲೇಔಟ್‍ನಲ್ಲಿ ಜಂಟಿ ನಿರ್ದೇಶಕ ಶಿವಕುಮಾರ್ ನಿವಾಸ, ಕೈಗಾರಿಕೆ & ವಾಣಿಜ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಿ.ಕೆ.ಶಿವಕುಮಾರ್, ಸಾರಿಗೆ ಇಲಾಖೆ ರಸ್ತೆ ಸುರಕ್ಷತೆಯ ಹೆಚ್ಚುವರಿ ಆಯುಕ್ತ ಸಿ.ಜೆ ಜ್ಞಾನೇಂದ್ರ ಕುಮಾರ್, ಜ್ಞಾನೇಂದ್ರ ಕುಮಾರ್ ಬಸವೇಶ್ವರ ನಗರ ಮನೆ ಹಾಗೂ ಶಾಂತಿನಗರ ಕಚೇರಿ, ಬಿಡಿಎ ನಗರ ಯೋಜನೆ ಉಪ ನಿರ್ದೇಶಕ ವಿ ರಾಕೇಶ್ ಕುಮಾರ್ ಹಾಗೂ ರಾಕೇಶ್ ಕುಮಾರ್ ಅವರ ನಾಗರಬಾವಿ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.