ದಾವಣಗೆರೆ: ಇಂದು ನಗರದ ಆರ್‌ಟಿಓ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಮಧ್ಯವರ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಾರ್ವಜನಿಕರಿಂದ ಡಿಎಲ್, ಎಲ್‍ಎಲ್‍ಆರ್ ಮಾಡಿಸಲು ದುಪ್ಪಟ್ಟು ದರ ಹಾಗೂ ಮತ್ತಿತರ ಕೆಲಸ ಮಾಡಿಸಲು ಸಾವಿರಾರು ರೂಪಾಯಿ ವಸೂಲು ಮಾಡುತ್ತಿದ್ದ ಮಧ್ಯವರ್ತಿಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮಧ್ಯವರ್ತಿಗಳ ಬಳಿ ಇದ್ದ ಅಪಾರ ಪ್ರಮಾಣದ ದಾಖಲೆಗಳನ್ನು ಮತ್ತು ಹಣವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿದ್ದ ಏಜೆಂಟ್‍ಗಳ ಹಾವಳಿಗೆ ಎಸಿಬಿ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.
Advertisement
Advertisement
ವಶಕ್ಕೆ ಪಡೆದುಕೊಂಡ ಮಧ್ಯವರ್ತಿಗಳ ಮೇಲೆ ಪ್ರಕರಣ ದಾಖಲು ಮಾಡಿದ್ದು, 15 ಜನ ಮಧ್ಯವರ್ತಿಗಳಿಂದ 1,76,855 ರೂಪಾಯಿ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಆರ್‌ಟಿಓ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಎಸಿಬಿ ಡಿವೈಎಸ್‍ಪಿ ಪರಮೇಶ್ವರಪ್ಪ ನೇತೃತ್ವದ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.