Advertisements

ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಪೇದೆಗಳು

ಬೆಳಗಾವಿ: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

Advertisements

ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

Advertisements

ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

Advertisements
Exit mobile version