ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.
ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.
Advertisement
Advertisement
ಜೆಪಿ ನಗರದ ಶಿವಲಿಂಗಯ್ಯ ಅವರಿಗೆ ಸೇರಿದ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಲಿಂಗಯ್ಯ ಬಿಡಿಎನ ಗಾರ್ಡೇನೇಯರ್ ಆಗಿದ್ದಾರೆ. ಅಷ್ಟೇ ಅಲ್ಲದೇ ಬಸವನಗುಡಿ, ಕನಕಪುರ ರೋಡ್, ಹಾಗೂ ದೊಡ್ಡಕಲ್ಲಸಂದ್ರದ ಮನೆಗಳ ಮೇಲೆ ದಾಳಿ ನಡೆದಿದೆ. ಕೇವಲ ಬೆಂಗಳೂರೊಂದೇ ಅಲ್ಲದೇ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Advertisement
ಜನಾರ್ದನ್ ಹಾಗೂ ಅವರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಇದೀಗ ಜನಾರ್ದನ್ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ವಿಭಾಗದ ರಿಜಿಸ್ಟರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಚಂದ್ರಲೇಔಟ್‍ನಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಗೊಬ್ಬರ ಸಿಗದಿದ್ದರೆ ನಾನೇನು ಮಾಡಲಿ – ಅಲವತ್ತುಕೊಂಡ ರೈತನ ಮುಂದೆ ಸಚಿವ ಉಡಾಫೆ ಮಾತು
Advertisement
ಅಷ್ಟೇ ಅಲ್ಲದೇ ಬಾಗಲಕೋಟೆಯ ಶಂಕರ್ ಗೋಗಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಂಕರ್ ಗೋಗಿ ಹಾಗೂ ಆಪ್ತರ ಮನೆಗಳು ಸೇರಿ ಜಿಲ್ಲೆಯ ಒಟ್ಟು 5 ಕಡೆಗಳಲ್ಲಿ ದಾಳಿ ನಡೆಸಿದೆ.
ಹಾಸನದ ಎಇಇ ರಾಮಕೃಷ್ಣಗೆ ಸೇರಿದೆ ಮನೆ, ಆಫೀಸ್ ಸೇರಿ ಮೂರು ಕಡೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಾಸನದ ವಿದ್ಯಾನಗರದಲ್ಲಿರುವ ನಿವಾಸ ಕಚೇರಿ ಮೇಲೆ ದಾಳಿ ನಡೆದಿದೆ. ರಾಮಕೃಷ್ಣ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗದಿದ್ದಕ್ಕೆ ವಿಷ ಕುಡಿದ ಮಹಿಳಾ ಸದಸ್ಯೆ
ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ ಬೀದರ್ ಸಿಡಿಪಿಓ ತಿಪ್ಪಣ್ಣ ಮನೆ ಮೇಲೆ ಎಸಿಬಿ ದಾಳಿ ನಡೆದಿದ್ದು, ತಿಪ್ಪಣ್ಣ ಕಾರ್ಯನಿರ್ವಹಿಸುವ ಬೀದರ್ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.