ಕೊಪ್ಪಳ: ಭ್ರಷ್ಟಾಚಾರ ಹಾಗೂ ಏಜೆಂಟರ ಹಾವಳಿ ಆರೋಪದ ಹಿನ್ನಲೆಯಲ್ಲಿ ಕೊಪ್ಪಳದ ಆರ್‌ಟಿಓ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳ ನಗರದ ಹೊರವಲಯದಲ್ಲಿರುವ ಆರ್‌ಟಿಓ ಕಚೇರಿ ಮೇಲೆ ಎಸಿಬಿ ಡಿವೈಎಸ್‍ಪಿ ಆರ್.ಎಸ್ ಉಜ್ಜಿನಕೊಪ್ಪ, ಚಂದ್ರಕಾಂತ್ ಪೂಜಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಎಸಿಬಿ ಅಧಿಕಾರಿಗಳು ಏಜೆಂಟರನ್ನು ಹಾಗೂ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರ್‌ಟಿಓ ಕಚೇರಿಯಲ್ಲಿನ ನೌಕರರು ಹಾಗೂ ಏಜೆಂಟರು ಸಾರ್ವಜನಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿರುವ ಕುರಿತು ಎಸಿಬಿ ಅಧಿಕಾರಿಗಳಿಗೆ ದೂರುಗಳು ಬಂದಿದ್ದವು. ಈ ದೂರಿನ ಹಿನ್ನಲೆಯಲ್ಲಿ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳು ಹಲವಾರು ಏಜೆಂಟರು ಹಾಗೂ ನೌಕರರಿಂದ ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.