ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ (Vidhaan Parishad Members) ನಾಮ ನಿರ್ದೇಶನ ಗೊಂಡಿರುವ ಮಾಜಿ ಸಚಿವರಾದ ಎಂ.ಆರ್ ಸೀತಾರಾಂ, ಉಮಾಶ್ರೀ ಹಾಗೂ ಮುಖಂಡ ಹೆಚ್.ಪಿ ಸುದಾಮ್ ದಾಸ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧ (Vidhaan Soudha) ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ರಾಜ್ಯ ಬಿಜೆಪಿಗೆ ಬಿಎಲ್ ಸಂತೋಷ್ ಟಾನಿಕ್ – ವಲಸಿಗರ ಪರ ಬ್ಯಾಟಿಂಗ್
ಈ ಸಂದರ್ಭದಲ್ಲಿ ಸಭಾಪತಿ ಹೊರಟ್ಟಿ ನೂತನ ಸದಸ್ಯರಿಗೆ ಸಂಪ್ರದಾಯದಂತೆ ವಿಧಾನಪರಿಷತ್ತಿನ ನಡಾವಳಿ ಪುಸ್ತಕ ಒಳಗೊಂಡ ಸೂಟ್ ಕೇಸ್ ನೀಡಿ ಶುಭ ಹಾರೈಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೂತನ ಸದಸ್ಯರಿಗೆ ಹೂಗುಚ್ಚ ನೀಡಿ ಸಿಹಿ ತಿನ್ನಿಸಿ ಶುಭಾಶಯ ಕೋರಿದರು. ಇದನ್ನೂ ಓದಿ: BJP ಸ್ಥಿರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ – ತೇಜಸ್ವಿ ಸೂರ್ಯ
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು, ಹಲವು ಶಾಸಕರು ಭಾಗವಹಿಸಿದ್ದರು.
Web Stories