ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜ್ಯದ ಮೂವರು ಸಂಸದರು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಾಸಕರು ನೀಡಿದ್ದ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್ ಅಂಗೀಕರಿಸಿದ್ದಾರೆ. ಬಳ್ಳಾರಿ ಲೋಕಸಭಾ ಸದಸ್ಯ ಶ್ರೀರಾಮುಲು, ಶಿವಮೊಗ್ಗ ಸಂಸದ ಬಿ.ಎಸ್. ಯಡಿಯೂರಪ್ಪ ಹಾಗೂ ಮಂಡ್ಯ ಸಂಸದ ಪುಟ್ಟರಾಜು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Advertisement
ಈ ಮೂವರು ಶಾಸಕರಾಗಿ ಆಯ್ಕೆ ಹಿನ್ನೆಲೆಯಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಹಾಗೆಯೇ ಯಡಿಯೂರಪ್ಪ ಶಿಕಾರಿಪುರದಿಂದ ಹಾಗೂ ಪುಟ್ಟರಾಜು ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದು, ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
Advertisement