ಕೋಲ್ಕತ್ತಾ: ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದೆಲ್ಲವನ್ನು ಕೊಡಿ ಎಂದು ಆರ್‌ಜಿ ಕರ್ ಕಾಲೇಜಿನ (RG Kar College) ವೈದ್ಯರು ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಚಹಾ ಆಹ್ವಾನ ನಿರಾಕರಿಸಿ ಹೇಳಿದರು.
ಶನಿವಾರ ಕಾಳಿಘಾಟ್‌ನಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆಯಲ್ಲಿದ್ದ ವೈದ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ: ಎನ್ ರವಿಕುಮಾರ್
ಸಿಎಂ ಮಮತಾ ಬ್ಯಾನರ್ಜಿ ಚಹಾ ಕುಡಿಯಲು ಪ್ರತಿಭಟನಾನಿರತ ವೈದ್ಯರನ್ನು ಆಹ್ವಾನಿಸಿದ್ದರು. ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದನ್ನೆಲ್ಲಾ ಕೊಡಿ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬರ್ಬರವಾಗಿ ಅತ್ಯಾಚಾರ, ಹತ್ಯೆಗೀಡಾದ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆ ಸಾವಿಗೆ ನ್ಯಾಯ ಬೇಕು. ನ್ಯಾಯ ಸಿಕ್ಕರೆ ಮಾತ್ರ ಚಹಾವನ್ನು ಸ್ವೀಕರಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.
ಕೋಲ್ಕತ್ತಾದಲ್ಲಿ ಮಳೆಯ ನಡುವೆಯೂ ತಮ್ಮ ಮನೆಯ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರೊಂದಿಗೆ ಮಮತಾ ಬ್ಯಾನರ್ಜಿ ಮಾತನಾಡಿದರು.ಇದನ್ನೂ ಓದಿ: ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ
ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾಕ್ಷ್ಯವನ್ನು ತಿರುಚಿದ್ದಕ್ಕಾಗಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ.