ರಾಮನಗರ: ಖಾಸಗಿ ಬಸ್ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಆನೆಕೆರೆ ಬೀದಿಯ ನಿವಾಸಿಗಳಾದ ರಾಜೇಂದ್ರ ಹಾಗೂ ಪವನ್ ಮೃತ ದುರ್ದೈವಿಗಳು. ಹೋಂಡಾ ಕಾರಿನಲ್ಲಿ ಮಂಡ್ಯದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಹೋಂಡಾ ಕಾರಿಗೆ ಮೊದಲು ಡಿಕ್ಕಿ ಹೊಡೆದಿದೆ.
ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಹೋಂಡಾ ಕಾರ್ ಡಿವೈಡರ್ ಗೆ ನಿಂದ ಹಾರಿ ಮೈಸೂರು ಕಡೆಗೆ ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ರಾಜೇಂದ್ರ ಹಾಗೂ ಪವನ್ ಇಬ್ಬರೂ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಹೋಂಡಾ ಕಾರಿನಲ್ಲಿದ್ದ ಒಬ್ಬರು ಹಾಗೂ ಡಿಸೈರ್ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರಣಿ ಅಪಘಾತದಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv